ADVERTISEMENT

ಆರೋಗ್ಯ ಇಲಾಖೆ ಉದ್ಯೋಗಾವಕಾಶ

​ಪ್ರಜಾವಾಣಿ ವಾರ್ತೆ
Published 11 ಜೂನ್ 2012, 7:35 IST
Last Updated 11 ಜೂನ್ 2012, 7:35 IST

ಚಿಕ್ಕಮಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಡಿ ನೌಕರರ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸ ಲಾಗಿದೆ. ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 2323 ಹಾಸ್ಪಿಟಲ್ ಅಟೆಂಡರ್ ಗ್ರೇಡ್-2 ಗ್ರೂಪ್ ಡಿ ಖಾಲಿ ಹುದ್ದೆ ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 
ವೆಬ್ ಸೈಟ್ ಡಿಡಿಡಿ.ಚ್ಟಜ್ಛಡಿ.ಜಟ.ಜ್ಞಿ  ಮೂಲಕ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ 30 ಹಾಗೂ ಬ್ಯಾಂಕ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಜುಲೈ 7 ಕೊನೆ ದಿನ. ಹೆಚ್ಚಿನ ಮಾಹಿತಿ ಗಾಗಿ ಜಿ.ಪಂ ಸಮೀಪದ ಆರೋಗ್ಯ ಇಲಾಖೆ ಕಚೇರಿ ಸಂಪರ್ಕಿಸಬಹುದು ಎಂದು  ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.