ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ; ಸಿದ್ಧತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 6:07 IST
Last Updated 10 ಮಾರ್ಚ್ 2018, 6:07 IST
ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಮಾತನಾಡಿದರು. ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಇದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಮಾತನಾಡಿದರು. ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಇದ್ದಾರೆ.   

ಚಿಕ್ಕಮಗಳೂರು: ಮಾರ್ಚ್ 23ರಿಂದ ಏಪ್ರಿಲ್ 6 ರವೆರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಸೂಚಿಸಿದರು.

ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 14,592 ಪರೀಕ್ಷಾರ್ಥಿಗಳು ಇದ್ದಾರೆ. 58 ಪರೀಕ್ಷಾ ಕೇಂದ್ರಗಳಿವೆ. ಕುಡಿಯುವ ನೀರು, ಆಸನ, ಮೂಲಸೌಕರ್ಯ ಒದಗಿಸಬೇಕು ಎಂದರು.

ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾ ಕಾರ್ಯನಿರ್ವಹಣೆ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಪರೀಕ್ಷಾ ದಿನಗಳಂದು ಕೇಂದ್ರದ ಸಮೀಪದ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ಸೂಚಿಸಬೇಕು. ಪರೀಕ್ಷಾ ಕೇಂದ್ರದೊಳಕ್ಕೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಒಯ್ಯುವಂತಿಲ್ಲ ಎಂದು ತಿಳಿಸಿದರು.

ADVERTISEMENT

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಸನ್ನಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.