ಬಾಳೆಹೊನ್ನೂರು: ಇಲ್ಲಿನ ಪುರಾಣ ಪ್ರಸಿದ್ಧ ಖಾಂಡ್ಯದ ತ್ರಯಂಬಕ ಮೃತ್ಯುಂಜಯ ಮಾರ್ಕಾಂಡೇಶ್ವರ ಸ್ವಾಮಿ ಮಹಾರಥೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು.
ಮಹಾರಥೋತ್ಸವ ಪೂರ್ವಾಭಾವಿಯಾಗಿ ಕಳೆದ ಬುಧವಾರದಿಂದ ವಿವಿಧ ಧಾರ್ಮಿಕ ಕಾರ್ಯಗಳು ನೆರವೇರಿವೆ. ಗುರು-ಗಣಪತಿ ಪೂಜೆ, ಪುಣ್ಯಾಹ, ದೇವನಾಂದಿ, ಗಣಪತಿ ಹೋಮ, ನೂತನ ಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಪುನರ್‌ಅಷ್ಟಬಂಧ ಪ್ರತಿಷ್ಠಾ ಮಹೋತ್ಸವ, ಮಾರ್ಕಾಂಡೇಶ್ವರ ಸ್ವಾಮಿಯ ರಾಜಗೋಪುರದ ಶಿಖರ ಕಲಶ ಪ್ರತಿಷ್ಠಾಪನಾ ಬ್ರಹ್ಮ ಕುಂಭಾಭಿಷೇಕ, ಗಂಗೆಗಿರಿ ಪಂಚಮುಖಿ ಕ್ಷೇತ್ರದಲ್ಲಿ ಪೂಜೆ ನಡೆದಿದ್ದವು.
ಶನಿವಾರ ಮಧ್ಯಾಹ್ನ ಮಾರ್ಕಾಂಡೇಶ್ವರ ಸ್ವಾಮಿ ಮಹಾರಥೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಥೋತ್ಸವ ಸಂದರ್ಭ ಭಕ್ತಾದಿಗಳು ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು, ಸೇರಿದಂತೆ ವಿವಿಧ ದವಸ, ಧಾನ್ಯಗಳನ್ನು ಮಹಾರಥದೆಡೆಗೆ ಹಾಕಿ ಭಕ್ತಿ ಮೆರೆದರು. ಜಾತ್ರಾ ಮಹೋತ್ಸವ ಅಂಗವಾಗಿ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.