ತರೀಕೆರೆ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಪಟ್ಟಣದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್‌ಹೆಗ್ಡೆ ಪರ ಮತಯಾಚಿಸಿದ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗ್ರಾಮೀಣ ಪ್ರದೇಶದ ಕೆರೆ ಅಚ್ಚುಕಟ್ಟು, ಕುಡಿಯುವ ನೀರಿನ ಯೋಜನೆ ಮತ್ತು ಕಾಲುವೆಗಳ ದುರಸ್ತಿಗೆ ಹೆಚ್ಚಿನ ಆಧ್ಯತೆಯನ್ನು ನೀಡಿದೆ ಎಂದರು.
ಕೇಂದ್ರದ ಹತ್ತಾರು ಯೋಜನೆಗಳು ರಾಜ್ಯದಲ್ಲಿ ಜಾರಿಯಲ್ಲಿದ್ದು, ರಾಜ್ಯ ಸರ್ಕಾರದ ಯಾವುದೆ ಕಾರ್ಯಕ್ರಮದಲ್ಲಿ ಶೇ 80ರಷ್ಟು ಪಾಲನ್ನು ಹೊಂದಿದೆ. ಕಡೂರು ಚಿಕ್ಕಮಗಳೂರು ರೈಲು ಮಾರ್ಗ ಸೇರಿದಂತೆ ಅನೇಕ ರೈಲ್ವೆ ಯೋಜನೆಯನ್ನು ರಾಜ್ಯಕ್ಕೆ ನೀಡಿದು, ವಿವಿಧ ಇಲಾಖೆಗಳ ಮೂಲಕ ನೀಡಲಾಗಿದ್ದ ಕೇಂದ್ರ ಹಣವನ್ನು ರಾಜ್ಯ ಸರ್ಕಾರ ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಭಾರತೀಯ ಕಮ್ಯುನಿಷ್ಟ್ ಪಕ್ಷ ಮತ್ತು ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಪ್ರಗತಿ ಪರ ಸಂಘಟನೆಗಳು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದ್ದು, ತರೀಕೆರೆ ಪುರಸಭೆಯ ಅಮಾನತುಗೊಂಡ 10 ಕಾಂಗ್ರೆಸ್ ಸದಸ್ಯರ ಅಮಾನತು ಆದೇಶವನ್ನು ಪಕ್ಷ ಹಿಂದಕ್ಕೆ ಪಡೆದುಕೊಂಡಿದೆ ಎಂದರು.
ಮಾಜಿ ಸಭಾಪತಿ ವೀರಣ್ಣ ಮತಿಕಟ್ಟಿ, ಲಿಡ್ಕರ್ ಸಂಸ್ಥೆಯ ಮಾಜಿ ಅಧ್ಯಕ್ಷ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಎಸ್.ಎಂ.ನಾಗರಾಜ್, ಕೆಪಿಸಿಸಿ ಸದಸ್ಯ ಟಿ.ವಿ.ಶಿವಶಂಕರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್‌ಘನಿ ಅನ್ವರ್, ಕೆ.ಆರ್.ಧ್ರುವಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್.ಲೋಹಿತ್, ಮುಖಂಡರಾದ ಎಚ್.ಓಂಕಾರಪ್ಪ, ಜಿ.ಎಚ್.ಶ್ರೀನಿವಾಸ್, ಆರ್.ಮಂಜುನಾಥ್, ದೋರನಾಳ್ ಪರಮೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.