ADVERTISEMENT

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ವಿಸ್ತರಣೆ:ಡಿ.ಸಿ

ಅರಣ್ಯ ವಾಸಿಗಳ ಹಕ್ಕು ಕಾಯ್ದೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2014, 7:10 IST
Last Updated 6 ಫೆಬ್ರುವರಿ 2014, 7:10 IST
ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಜಿಲ್ಲಾಧಿಕಾರಿ ಬಿ.ಎಸ್.ಶೇಖರಪ್ಪ  ಅಧ್ಯಕ್ಷತೆಯಲ್ಲಿ ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಅಧಿ ನಿಯಮ ಅನುಷ್ಠಾನ ಪರಿಶೀಲನಾ ಸಭೆ ಬುಧವಾರ ನಡೆಯಿತು.
ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಎಸ್.ಶೇಖರಪ್ಪ ಅಧ್ಯಕ್ಷತೆಯಲ್ಲಿ ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಅಧಿ ನಿಯಮ ಅನುಷ್ಠಾನ ಪರಿಶೀಲನಾ ಸಭೆ ಬುಧವಾರ ನಡೆಯಿತು.   

ಚಿಕ್ಕಮಗಳೂರು: ಅನುಸೂಚಿತ ಬುಡಕಟ್ಟು ಮತ್ತು ಇತರೆ ಅರಣ್ಯ ಪಾರಂಪರಿಕ ಅರಣ್ಯವಾ ಸಿಗಳ ಅರಣ್ಯಹಕ್ಕು ಮಾನ್ಯ ಮಾಡುವ ಹಕ್ಕು ಕಾಯ್ದೆಯನ್ನು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ  ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಸ್.ಶೇಖರಪ್ಪ ತಿಳಿಸಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಬುಧ ವಾರ ನಡೆದ ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಅಧಿ ನಿಯಮ ಅನುಷ್ಠಾನ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಹಿಂದೆ ಗ್ರಾಮಗಳಿಗೆ ಸೀಮಿತವಾಗಿದ್ದ ಅರಣ್ಯ ಹಕ್ಕು ಮಾನ್ಯ ಮಾಡುವ ಕಾಯ್ದೆ ಮುನ್ಸಿಪಲ್‌ ಮತ್ತು ಪಟ್ಟಣ ಪಂಚಾಯಿತಿ, ನಗರಸಭೆ ವ್ಯಾಪ್ತಿಗೂ ಅನ್ವಯವಾಗುತ್ತದೆ. ಈ ವ್ಯಾಪ್ತಿ ಯಲ್ಲಿ ಮಿತಿಗಳನ್ನು ಗ್ರಾಮ ಅರಣ್ಯಹಕ್ಕು ಸಮಿತಿ ಗಳ ಮಾದರಿಯಲ್ಲಿ ರಚಿಸಬೇಕು ಎಂದರು.
ಅರಣ್ಯ ಹಕ್ಕುಗಳ ಮಾನ್ಯತೆಗೆ ಅರ್ಜಿ ಸಲ್ಲಿಸು ವುದು ನಿರಂತರವಾಗಿದೆ. ಈ ಕುರಿತು ಸಾರ್ವ ಜನಿಕರಿಗೆ ಹೆಚ್ಚಿನ ಪ್ರಚಾರ ನೀಡಬೇಕು. ಅರ್ಜಿ ಗಳನ್ನು ಪರಿಶೀಲಿಸಿ, ಸ್ಥಳ ಪರಿಶೀಲನೆ ಮಾಡು ವಾಗ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿ ರಬೇಕು. ತಿರಸ್ಕೃತಗೊಂಡ ಅರ್ಜಿದಾರರಿಗೆ ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವ ಕಾಶವನ್ನು 90 ದಿನಗಳಿಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.

ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅಧಿಬೋಗದ ಲ್ಲಿರುವ ಅರಣ್ಯ ಜಮೀನಿನಿಂದ ಅವರನ್ನು ಮಾನ್ಯತೆ ಮತ್ತು ಪರಿಶೀಲನಾ ಪ್ರಕ್ರಿಯೆ ಪೂರ್ಣ ಗೊಳ್ಳುವ ತನಕ ಒಕ್ಕಲೆಬ್ಬಿಸುವುದಾಗಲಿ, ಹೊರಹಾಕುವುದನ್ನು ಮಾಡುವಂತಿಲ್ಲ ಎಂದರು.

ಅರಣ್ಯ ಹಕ್ಕು ಸಮಿತಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಸಾಮಾಜಿಕ ಪ್ರೇರಕರು ಮತ್ತು ಕಾರ್ಯ ಕರ್ತರನ್ನು ನೇಮಿಸಿಕೊಳ್ಳಬೇಕು. ಅರಣ್ಯ ಹಕ್ಕು ಕಾಯ್ದೆಯಡಿ ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ  ಮತ್ತು ಅರಣ್ಯ ಹಕ್ಕು ಸಮಿತಿ ಸದಸ್ಯರಿಗೆ ತರ ಬೇತಿ ಕಾರ್ಯಾಗಾರ ನಡೆಸಲಾಗಿತ್ತು. ಇದನ್ನು ಸ್ಥಳೀಯವಾಗಿ ಮಾಡಬೇಕಾಗಿದೆ ಎಂದರು.


ಅರಣ್ಯ, ಸಮಾಜ ಕಲ್ಯಾಣಾಧಿಕಾರಿ, ಗಿರಿಜನ ಸಮನ್ವಯಾಧಿಕಾರಿಗಳು ಅರಣ್ಯ ಹಕ್ಕುಕಾಯ್ದೆ ಅನುಷ್ಠಾನಗೊಳಿಸ ಬೇಕೆಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕರುಣಾಕರ್, ಉಪ ವಿಭಾಗಾಧಿಕಾರಿ ಚನ್ನಬಸಪ್ಪ, ಜಿಲ್ಲಾಪಚಾಯಿತಿ ಸದಸ್ಯರಾದ ರಂಗನಾಥ್, ಜೆ.ಡಿ.ಲೋಕೇಶ್, ಕವಿತಾಚಂದ್ರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT