ನರಸಿಂಹರಾಜಪುರ: ಇಲ್ಲಿನ ಮೀನುಗಾರಿಕೆ ಇಲಾಖೆಯ ವಿಶೇಷ ಯೋಜನೆಯಡಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಮೀನು ಬಲೆ ವಿತರಿಸುವ ಕಾರ್ಯಕ್ರಮ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಶುಕ್ರವಾರ ನಡೆಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಫಲಾನುಭವಿಗಳಿಗೆ ಮೀನು ಬಲೆ ವಿತರಿಸಿದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಬಿ.ಬಿ.ಉಮಾ,ಸ್ಥಾಯಿ ಸಮಿತಿಅಧ್ಯಕ್ಷ ಜೆ.ಜಿ.ನಾಗರಾಜ್, ಮೀನು ಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಆರ್.ಪ್ರಕಾಶ್ ಇದ್ದರು.
ಉಪಗ್ರಹ ಆಧಾರಿತ ಕಾರ್ಯಾಗಾರ
ನರಸಿಂಹರಾಜಪುರ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಕುರಿತು ಉಪಗ್ರಹ ಆಧಾರಿತ ಕಾರ್ಯಕ್ರಮ ಗುರುವಾರ ನಡೆಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಕಾರ್ಯಕ್ರಮ ಉದ್ಘಾಟಿಸಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ.ಸುದರ್ಶನ್, ಎನ್‌ಆರ್‌ಎಚ್‌ಎಂ ಕಾರ್ಯಕ್ರಮದ ಧ್ಯೇಯೋದ್ದೇಶ, ಹಾಗೂ ಆರೋಗ್ಯ ಕಾರ್ಯಕರ್ತರು ಗುಣಾತ್ಮಕ ಸೇವೆ ನೀಡಬೇಕು ಎಂದು ಹೇಳಿದರು.
ವೈದ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಅಧಿಕಾರಿಗಳು, ಗ್ರಾಮಪಂಚಾಯಿತಿ ಅಧ್ಯಕ್ಷರು, ಕಾರ್ಯದರ್ಶಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಆರೋಗ ನೈರ್ಮಲ್ಯ ಸಮಿತಿ ಸದಸ್ಯರಿಗಾಗಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಬಿ.ಬಿ ಉಮಾ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಜೆ.ಜಿ ನಾಗರಾಜ್, ಕಾರ್ಯ ನಿರ್ವಹಣಾಧಿಕಾರಿ ಎಚ್ ಮಂಜುನಾಥ್, ಪದ್ಮಮ್ಮ, ಪ್ರಭಾಕರ್, ಬೇಬಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.