ADVERTISEMENT

ನೆಮ್ಮದಿಗೆ ಯೋಗ ಸಹಕಾರಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2011, 8:50 IST
Last Updated 8 ಮಾರ್ಚ್ 2011, 8:50 IST
ನೆಮ್ಮದಿಗೆ ಯೋಗ ಸಹಕಾರಿ
ನೆಮ್ಮದಿಗೆ ಯೋಗ ಸಹಕಾರಿ   

ಚಳ್ಳಕೆರೆ: ನೆಮ್ಮದಿಯಿಂದ ಬದುಕುವ ಕಲೆ ಯೋಗವನ್ನು ಪ್ರತಿಯೊಬ್ಬರೂ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಡಿವೈಎಸ್‌ಪಿ ಹನುಮಂತರಾಯ ಅಭಿಪ್ರಾಯಪಟ್ಟರು. ಚಳ್ಳಕೆರೆ ಪಟ್ಟಣದ ಎಚ್‌ಪಿಪಿಸಿ ಕಾಲೇಜಿನಲ್ಲಿ ಸೋಮವಾರ ಬೆಂಗಳೂರಿನ ಆರ್ಟ್ ಆಫ್ ಲೀವಿಂಗ್‌ನ ಸಹಯೋಗದಲ್ಲಿ ಆಯೋಜಿಸಿದ್ದ ‘ಮಾನವತೆ ಸುದರ್ಶನ ಕ್ರಿಯೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಲೇಜು ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯನ್ನು ಸಾಧಿಸಲು ಯೋಗ ಮತ್ತು ಧ್ಯಾನವನ್ನು ಮಾಡುವ ಮೂಲಕ ಶೈಕ್ಷಣಿಕ ಸಾಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿ ಜೀವನದಲ್ಲಿ ಮಾನವೀಯತೆ, ಸಹಕಾರ ಮನೋಭಾವ, ಸಹಬಾಳ್ವೆಯ ಅರ್ಥ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಧ್ಯಾನ ಮತ್ತು ಯೋಗದ ಸಂಪನ್ಮೂಲ ವ್ಯಕ್ತಿ ಪ್ರಸಾದ್ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ ಸಹೃದಯತೆ, ಗುರು-ಹಿರಿಯರ ಬಗ್ಗೆ ಗೌರವ ಬೆಳೆಸಿಕೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು. ಸಮಾರಂಭದಲ್ಲಿ ಪ್ರಾಂಶುಪಾಲ ಪ್ರೊ.ಸಿ.ಎಂ. ವಿವೇಕಾನಂದ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಪಿ. ಶಂಷಾದ್ ಅಧ್ಯಕ್ಷತೆ ವಹಿಸಿದ್ದರು. ಬಾಪೂಜಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್, ಪ್ರಾಧ್ಯಾಪಕ ಎಂ. ಶಿವಲಿಂಗಪ್ಪ ಉಪಸ್ಥಿತರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.