ADVERTISEMENT

ಪದವೀಧರರ ಕ್ಷೇತ್ರ; ಶಂಕರಮೂರ್ತಿ ಬಿಜೆಪಿ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2012, 8:20 IST
Last Updated 23 ಜನವರಿ 2012, 8:20 IST

ಚಿಕ್ಕಮಗಳೂರು: ನೈರುತ್ಯ ಪದವೀ ಧರರ ಕ್ಷೇತ್ರ ವ್ಯಾಪ್ತಿಯ ಪದವೀಧರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಫೆ. 5ರವರೆಗೆ ಅವಕಾಶವಿದೆ. ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ತಕ್ಷಣವೇ ನೋಂದಣಿ ಮಾಡಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಮನವಿ ಮಾಡಿದರು.

ಆರು ಜಿಲ್ಲೆಗಳನ್ನು ಒಳಗೊಂಡ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಈ ಬಾರಿಯೂ ಪಕ್ಷ ನನ್ನನ್ನೇ ಅಭ್ಯರ್ಥಿ ಯಾಗಿ ಪ್ರಕಟಿಸಿದೆ. ಇದೇ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದು, ಉತ್ತಮವಾಗಿ ಕೆಲಸ ಮಾಡಿದ್ದೇನೆ ಎಂದು ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಬಾರಿ ಯುವಕರಿಗೆ ಟಿಕೆಟ್ ನೀಡ ಬೇಕೆನ್ನುವ ಅಭಿಪ್ರಾಯ ಪಕ್ಷ ಮತ್ತು ಸಂಘ ಪರಿವಾರದವರು ವ್ಯಕ್ತಪಡಿ ಸಿದ್ದರಲ್ಲವೇ? ಎಂದು ಪ್ರಶ್ನಿಸಿದಾಗ, ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದೇನೆ.  ರಾಜ್ಯ ಘಟಕ ನನ್ನನ್ನೇ ಪಕ್ಷದ ಅಭ್ಯರ್ಥಿಯಾಗಿ ಅವಿರೋಧ ಆಯ್ಕೆ ಮಾಡಿದೆ. ಈ ಹಿಂದೆ ಅತ್ಯಧಿಕ ಮತ ಗಳಿಂದ ಗೆಲುವು ಸಾಧಿಸಿದ್ದೇನೆ. ಈ ಬಾರಿ ಯೂ ಅಷ್ಟೇ ವಿಶ್ವಾಸವಿದೆ ಎಂದರು.

ಸಿ.ಟಿ.ರವಿ ರವಿ,  ಪ್ರೇಂಕುಮಾರ್,  ಬಿ.ರಾಜಪ್ಪ, ಡಿ.ಕೆ.ನಿಂಗೇಗೌಡ, ವರಸಿದ್ದಿವೇಣು,   ಇದ್ದರು.
 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.