ADVERTISEMENT

ಪರಿಶುದ್ಧ ಮನಸ್ಸಿನ ಸೇವೆಯಿಂದ ನೆಮ್ಮದಿ ಸಾಧ್ಯ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2011, 5:50 IST
Last Updated 7 ಅಕ್ಟೋಬರ್ 2011, 5:50 IST

ಚಾಮರಾಜನಗರ: `ಸೇವಾ ಮನೋಭಾವ ನಿಂತ ನೀರಾಗದೆ ನಿರಂತರವಾಗಿರಬೇಕು. ಪರಿಶುದ್ಧ ಮನಸ್ಸಿನಿಂದ ಮಾಡಿದಂತಹ ಸೇವೆಯಿಂದ ಮಾನಸಿಕ ನೆಮ್ಮದಿ ಲಭಿಸುತ್ತದೆ~ ಎಂದು ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿ ಜಿ.ಎಸ್. ಜಯದೇವ ಹೇಳಿದರು.

ತಾಲ್ಲೂಕಿನ ಮುರಟಿಪಾಳ್ಯದ ಸರ್ಕಾರಿ ಗಿರಿಜನ ಆಶ್ರಮ ಶಾಲೆಯಲ್ಲಿ ಈಚೆಗೆ ನಡೆದ ಜೆಎಸ್‌ಎಸ್ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಯಾವುದೇ ಸೇವೆ ಮಾಡಿದಾಗಲೂ ಅದು ಎಲ್ಲರ ಮನಸ್ಸಿನಲ್ಲಿ ಉಳಿಸು ವಂತಾಗಬೇಕು ಎಂದರು.

ಜೆಎಸ್‌ಎಸ್ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಕೆ. ರಾಜೇಶ್ ಮಾತನಾಡಿ, ಈ ಭಾಗದ ಗಿರಿಜನರಿಗೆ ಶಿಬಿರಾರ್ಥಿಗಳ ಜತೆಗೆ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರ, ಕಾನೂನು ಅರಿವು ಶಿಬಿರ, ಗ್ರಾಮದ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾ ಚಂದ್ರು ಗ್ರಾಮದ ಫಲಾನುಭವಿ ಗಳಿಗೆ ಶೌಚಾಲಯ ನಿರ್ಮಿಸಲು ಬೇಕಾಗುವ ಪರಿಕರ ವಿತರಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಎ.ಜೆ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯೆ ಜಿ.ಎಸ್. ನಿತ್ಯಾ, ಹೊಂಗನೂರು ಗ್ರಾ.ಪಂ. ಅಧ್ಯಕ್ಷೆ ಜೀನತ್‌ಬೀ ಇತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.