ADVERTISEMENT

ಬಿಜೆಪಿ ಅಭ್ಯರ್ಥಿಗಳ ಗೆಲುವು: ಕಾರ್ಯಕರ್ತರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 14 ಜೂನ್ 2012, 6:25 IST
Last Updated 14 ಜೂನ್ 2012, 6:25 IST

ಚಿಕ್ಕಮಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಿ.ಎಚ್.ಶಂಕರಮೂರ್ತಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಬುಧವಾರ ರಾತ್ರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ನಗರದ ಹನುಮಂತಂಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ, ಪಕ್ಷದ ಪರ ಜಯಘೋಷ ಕೂಗಿ ಕುಪ್ಪಳಿಸಿದರು. ಪಕ್ಷದ ಜಿಲ್ಲಾ ವಕ್ತಾರ ರಾಜಪ್ಪ, ಮುಖಂಡರಾದ ಕೋಟೆ ರಂಗನಾಥ, ಶ್ರೀನಿವಾಸ, ಕುರೇಶಿ ಇನ್ನಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಪ್ರಜ್ಞಾವಂತರು ಕೈಬಿಡಲಿಲ್ಲ: `ಈ ಗೆಲುವು ಪ್ರಜ್ಞಾವಂತ ಮತ್ತು ಸುಶಿಕ್ಷಿತ ಮತದಾರರು ಬಿಜೆಪಿಯನ್ನು ಕೈಬಿಟ್ಟಿಲ್ಲ ಎನ್ನುವುದರ ಸೂಚಕ. ಸುಶಿಕ್ಷಿತ ಮತದಾರರು ಉತ್ತಮ ವ್ಯಕ್ತಿತ್ವದ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಿದ್ದಾರೆ.

ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರು ಮತ್ತು ಅಭ್ಯರ್ಥಿ ಗಳನ್ನು ಬೆಂಬಲಿಸಿದ ಮತದಾರರಿಗೆ ಪಕ್ಷ ಕೃತಜ್ಞವಾಗಿದೆ. ಕಷ್ಟ ಕಾಲದಲ್ಲೂ ದೊರೆತಿರುವ ಗೆಲುವು ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಲು ಸ್ಫೂರ್ತಿ ನೀಡಿದೆ~ ಎಂದು ಬಿಜೆಪಿ ರಾಜ್ಯ ಪ್ರಧಾನಕಾಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.