ADVERTISEMENT

`ಮತದಾನದಿಂದ ಪ್ರಜಾಪ್ರಭುತ್ವ ಸುಭದ್ರ'

ಮತದಾರರ ನೋಂದಣಿ, ಜಾಗೃತಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 6:51 IST
Last Updated 6 ಏಪ್ರಿಲ್ 2013, 6:51 IST

ತರೀಕೆರೆ: ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸಿ ಸದೃಢಗೊಳಿಸುವಲ್ಲಿ ಮತ ದಾನದ ಹಕ್ಕನ್ನು ಸಮರ್ಪಕವಾಗಿ ಬಳಸುವುದು ಅಗತ್ಯ ಎಂದು ಸಿವಿಲ್ ನ್ಯಾಯಾಧೀಶ ಪ್ರಭು ಎನ್. ಬಡಿಗೇರ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಕಾಲೇಜು ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಮತದಾರರ ನೋಂದಣಿ ಮತ್ತು ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಪ್ರಧಾನವಾಗಿದ್ದು, ತಮ್ಮ ಮತವನ್ನು ಸೂಕ್ತ ಅಭ್ಯರ್ಥಿಗಳಿಗೆ ನೀಡುವ ಮೂಲಕ ಪ್ರಜಾತಂತ್ರ ವ್ಯವಸ್ಥೆ ಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸದೃಢ ಭಾರತ ನಿರ್ಮಾಣ ಮಾಡುವಲ್ಲಿ ಮುಂದಾಗುವಂತೆ ಕರೆ ನೀಡಿದರು.

ಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೇ ಸ್ವತಂತ್ರ ಹಾಗೂ ವಿವೇಚನೆಯಿಂದ ಮತದಾನದ ಹಕ್ಕನ್ನು ಬಳಸುವಂತೆ ತಿಳಿಸಿದ ಅವರು, ರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಯುವ ಜನತೆ ತಮ್ಮನ್ನು ಮತ ನೀಡುವ ಮೂಲಕ ತೊಡಗಿಸಿಕೊಳ್ಳುವಂತೆ ತಿಳಿಸಿದರು.

ಎಸ್‌ಜೆಎಂ ಕಾಲೇಜಿನ ಪ್ರಾಧ್ಯಾಪಕ ಕೆ.ಆರ್.ವಿರೇಶ್, ಬಿಆರ್‌ಸಿಯ ಗುರುಮೂರ್ತಿ ಮತದಾರರ ನೊಂದಣಿ ಮತ್ತು ಜಾಗೃತಿ ಕುರಿತಂತೆ ಉಪನ್ಯಾಸ ನೀಡಿದರು.

ಸಮಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಆಲಿಸ್ ಡಿಕಾಸ್ಟಾ, ಉಪನ್ಯಾಸಕರಾದ, ಡಾ.ಜಗದೀಶ್, ಪಿ.ಜಿ.ಶಿವಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.