ADVERTISEMENT

ಮತದಾನ ಜಾಗೃತಿ ಕಾರ್ಯಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2013, 9:29 IST
Last Updated 24 ಏಪ್ರಿಲ್ 2013, 9:29 IST

ನರಸಿಂಹರಾಜಪುರ: ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಚುನಾ ವಣೆಯಲ್ಲಿ ಪಾಲ್ಗೂಳ್ಳುವಿಕೆ ಸಮಿತಿ (ಸ್ವೀಪ್) ವತಿಯಿಂದ ಸೋಮವಾರ  ಮತದಾನದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು.

ಸ್ವೀಪ್ ಸಮಿತಿಯ ತಾಲ್ಲೂಕು ನೋಡಲ್ ಅಧಿಕಾರಿ ಜಿಲ್ಲಾ ಯುವಜನ ಮತ್ತು ಕ್ರೀಡಾಧಿಕಾರಿ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೌಸ್‌ಮೋಯಿದ್ದಿನ್,ಕಾರ್ಯ ದರ್ಶಿಮೋಗಣ್ಣಗೌಡ, ಮುಖ್ಯಾಧಿಕಾರಿ ನಾಗೇಂದ್ರ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಶಾಂತಪ್ಪ ಹಾಗೂ ತಾಲ್ಲೂಕಿ ಎಲ್ಲಾ ಇಲಾಖೆಗಳ ಅಧಿಕಾರಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.