ADVERTISEMENT

‘ಮತದಾನ ಮಾಡಲು ನಿರ್ಲಕ್ಷ ಬೇಡ’

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 6:47 IST
Last Updated 21 ಏಪ್ರಿಲ್ 2018, 6:47 IST

ಚಿಕ್ಕಮಗಳೂರು: ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು ಎಂದು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು.

ನಗರದ ಐ.ಜಿ.ರಸ್ತೆಯಲ್ಲಿ ಶುಕ್ರವಾರ ಪೌರ ಕಾರ್ಮಿಕರಿಗೆ ಏರ್ಪಡಿಸಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತದಾನ ಮಾಡಲು ನಿರ್ಲಕ್ಷ್ಯ ವಹಿಸಬಾರದು. ಆಮಿಷಗಳಿಗೆ ಬಲಿ ಯಾಗಬಾರದು. ಉತ್ತಮ ಜನಪ್ರ ತಿನಿಧಿ ಆಯ್ಕೆ ಮಾಡಿ, ದೇಶದ ಪ್ರಗತಿಗೆ ಕೈ ಜೋಡಿಸಬೇಕು ಎಂದರು.

ಈ ಬಾರಿ ಚುನಾವಣೆಯಲ್ಲಿ ವಿದ್ಯುನ್ಮಾನ ಮತ ಯಂತ್ರದ ಜೊತೆಗೆ ವಿವಿಪ್ಯಾಟ್ ಯಂತ್ರ ಅಳವಡಿಸಲಾಗಿರುತ್ತದೆ. ಮತ ಚಲಾಯಿಸಿದಾಗ ಅದರಲ್ಲಿ ಅಭ್ಯರ್ಥಿ ಹೆಸರು ಮತ್ತು ಚಿಹ್ನೆ ಮುದ್ರಿತ ಚೀಟಿಯಲ್ಲಿ ಏಳು ಸೆಕೆಂಡ್ ಪ್ರದರ್ಶನವಾಗುತ್ತದೆ. ಯಾರಿಗೆ ಮತದಾನ ಮಾಡಲಾಗಿದೆ ಎನ್ನುವುದನ್ನು ಅದರಿಂದ ಖಚಿತ ಪಡಿಸಿಕೊಳ್ಳಬಹುದು ಎಂದರು.

ADVERTISEMENT

ಜಿಲ್ಲೆಯ ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ, ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೌರ ಕಾರ್ಮಿಕರ ಮಕ್ಕಳಿಗೆ ಪರೀಕ್ಷೆ ಇಲ್ಲದೇ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು. ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಚಾರ್ಯರಾದ ಶಿವಕುಮಾರ್, ಗಜೇಂದ್ರ ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.