ADVERTISEMENT

ಮಾಹಿತಿ ಆಯೋಗದ ಆಯುಕ್ತರ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2017, 7:33 IST
Last Updated 11 ಡಿಸೆಂಬರ್ 2017, 7:33 IST
ಮಾಹಿತಿ ಆಯೋಗದ ಆಯುಕ್ತರ ವಿರುದ್ಧ ದೂರು
ಮಾಹಿತಿ ಆಯೋಗದ ಆಯುಕ್ತರ ವಿರುದ್ಧ ದೂರು   

ಕೊಪ್ಪ: ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ದೂರಿನ ಬಗ್ಗೆ 7-8 ಬಾರಿ ವಿಚಾರಣೆ ನಡೆಸಿದರೂ ಆದೇಶ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿರುವುದಾಗಿ ತಾಲ್ಲೂಕಿನ ಹರಂದೂರು ಗ್ರಾಮದ ಚಿಕ್ಕನಗುಂಡಿ ನಿವಾಸಿ, ಮಾಹಿತಿ ಹಕ್ಕು ಕಾರ್ಯಕರ್ತ ಅಬ್ರಹಾಂ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ 2014ರಲ್ಲಿ ಕೊಪ್ಪ ತಹಶೀಲ್ದಾರ್ ವಿರುದ್ಧ ಪ್ರಕರಣ ಸಂಖ್ಯೆ ಕೆ.ಐ.ಸಿ 1375, 1376 ಮತ್ತು 1377ಕ್ಕೆ ಸಂಬಂಧಪಟ್ಟಂತೆ ಮೂರು ದೂರುಗಳನ್ನು ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಸಲ್ಲಿಸಿದ್ದೆ' ಎಂದು ತಿಳಿಸಿದ್ದಾರೆ.

‘ಆಯುಕ್ತರು ಮೂರು ಅರ್ಜಿಗಳ ಬಗ್ಗೆ ವಿಚಾರಣೆ ನಡೆಸಿದರೂ ಯಾವೊಂದೂ ಆದೇಶ ನೀಡದಿರುವುದರಿಂದ ನನಗೆ ಅನ್ಯಾಯವಾಗಿದೆ. ಆದ್ದರಿಂದ ಈ ದೂರಿನ ಬಗ್ಗೆ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ರಾಷ್ಟ್ರಪತಿ, ಪ್ರಧಾನಿ, ಕೇಂದ್ರ ಕಾನೂನು ಸಚಿವರು, ವಿರೋಧ ಪಕ್ಷದ ನಾಯಕರು ಹಾಗೂ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಿಗೆ ದೂರು ಸಲ್ಲಿಸಿದ್ದೇನೆ’ ಎಂದಿದ್ದಾರೆ.

ADVERTISEMENT

‘ಮಾಹಿತಿ ಆಯೋಗದ ಆಯುಕ್ತರು ಅನ್ಯಾಯ ಎಸಗಿದಾಗ ಕ್ರಮ ಕೈಗೊಳ್ಳುವ ಅಧಿಕಾರವನ್ನು ಹಾಗೂ ಆಯುಕ್ತರನ್ನು ನೇಮಿಸುವ ಮತ್ತು ವಜಾಗೊಳಿಸುವ ಪರಮಾಧಿಕಾರವನ್ನು ಆಯಾ ರಾಜ್ಯದ ರಾಜ್ಯಪಾಲರು, ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು. ಹೈಕೋರ್ಟ್‌ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಗೆ ವಹಿಸ ಬೇಕೆಂದೂ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದೇನೆ. ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.