ADVERTISEMENT

ಮುಖ್ಯಮಂತ್ರಿ ಜಿಲ್ಲೆಗೆ ನಾಳೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2012, 8:15 IST
Last Updated 7 ಜನವರಿ 2012, 8:15 IST

ಚಿಕ್ಕಮಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಇದೇ 8ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 12 ಗಂಟೆಗೆ ಐಡಿಎಸ್‌ಜಿ ಕಾಲೇಜು ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿ ಆಗಮಿಸುವರು. ಮಧ್ಯಾಹ್ನ 12.15 ಜಿಲ್ಲಾ ಪಂಚಾ ಯಿತಿ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ ಹಾಗೂ ವಿವಿಧ ಅಭಿವೃದ್ದಿ ಕಾಮ ಗಾರಿಗಳ ಶಿಲಾನ್ಯಾಸ ನೆರವೇರಿಸುವರು.

1ಗಂಟೆಗೆ ರೈತ ಹಿತರಕ್ಷಣಾ ಸಮಿತಿ ಹಾಗೂ ಹಳದಿ ಎಲೆ ರೋಗಬಾಧಿತ ರೈತರ ನಿಯೋಗದ ಭೇಟಿ ಮತ್ತು ಚರ್ಚೆ, 1.20ಕ್ಕೆ ಕುವೆಂಪು ಕಲಾಮಂದಿರದಲ್ಲಿ ರಾಷ್ಟ್ರೀ ಯ ಭಾವೈಕ್ಯ ವಿಶ್ವ ಕರ್ಮ ಧನ್ಯ ಮಹಾಸಮ್ಮೇಳನದಲ್ಲಿ ಪಾಲ್ಗೊಂಡು ಪ್ರಶಸ್ತಿ ಪ್ರದಾನ ಮಾಡುವರು.

3 ಗಂಟೆಗೆ ಡಿಸಿಸಿ ಬ್ಯಾಂಕ್ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, 3.30ಕ್ಕೆ ಬಿಂಡಿಗ ದೇವಿರಮ್ಮ ದೇವಸ್ಥಾನಕ್ಕೆ ಭೇಟಿ ಮತ್ತು ಪೂಜೆ, ಸಂಜೆ 4 ಗಂಟೆಗೆ ಮೌಂಟೆನ್‌ವ್ಯೆ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಸಂಜೆ 4.45ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

ಪ್ರಶಸ್ತಿ ಪ್ರದಾನ ನಾಳೆ
ಚಿಕ್ಕಮಗಳೂರು: ರಾಷ್ಟ್ರೀಯ ಭಾವೈಕ್ಯ ವಿಶ್ವಕರ್ಮ ಧನ್ಯ ಮಹಾ ಸಮ್ಮೇಳನ ಹಾಗೂ ರಾಷ್ಟ್ರೀಯ ಭಾವೈಕ್ಯ ಪ್ರಶಸ್ತಿ ಪ್ರದಾನ ಸಮಾರಂಭ ಇದೇ 8ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ರಾಜ್ಯ ವಿಶ್ವಕರ್ಮ ಸಾಮಾಜಿಕ ರಾಜಕೀಯ ಕ್ರಿಯಾ ಸಮಿತಿ ರಾಜ್ಯ ಅಧ್ಯಕ್ಷ ಪುರುಷೋ ತ್ತಮ ಆಚಾರ್ ತಿಳಿಸಿದರು.

ಇದೇ 8ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಪ್ರದಾನ ಮಾಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.