ADVERTISEMENT

ಶಿಕ್ಷಕರ ಬೇಡಿಕೆ ಈಡೇರಿಸಲು ಆದ್ಯತೆ

ವಿಧಾನ ಪರಿಷತ್‌ ನೂತನ ಸದಸ್ಯ ಎಸ್‌.ಎಲ್‌.ಭೋಜೇಗೌಡ ಭರವಸೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2018, 11:18 IST
Last Updated 15 ಜೂನ್ 2018, 11:18 IST

ಚಿಕ್ಕಮಗಳೂರು: ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತೇನೆ. ಶಿಕ್ಷಕರ ಬೇಡಿಕೆ ಗಳನ್ನು ಈಡೇರಿಸಲು ಆದ್ಯ ಗಮನ ಹರಿಸುತ್ತೇನೆ ಎಂದು ವಿಧಾನ ಪರಿಷತ್ತಿಗೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಸ್‌.ಎಲ್‌.ಭೋಜೇಗೌಡ ಹೇಳಿದರು.

‘ನೈರುತ್ಯ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಗಳ 27 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು. ಐದು ಕಡೆ ಬಿಜೆಪಿ ಸಂಸದರು ಇದ್ದರೂ, ಈ ಭಾಗದ ಶಿಕ್ಷಕರು ವಿಶ್ವಾಸ ಇಟ್ಟು ಮತ ಹಾಕಿದ್ದಾರೆ. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಧಿಕಾರ ಶಾಶ್ವತವಲ್ಲ. ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸ ಮುಖ್ಯವಾಗುತ್ತದೆ’ ಎಂದು ಅವರು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಜೆಡಿಎಸ್‌ ಮುಖಂಡರು, ಕಾರ್ಯ ಕರ್ತರ ಪ್ರಯತ್ನದಿಂದ ಗೆಲುವು ಸಾಧ್ಯವಾಯಿತು. ಕಾಂಗ್ರೆಸ್‌ನವರು ನೆರವು ನೀಡಿಲ್ಲ. ಕಾಂಗ್ರೆಸ್‌ ಅಭ್ಯ ರ್ಥಿಯೂ ಕಣದಲ್ಲಿ ಇದ್ದರು. ರಾಜ್ಯದಲ್ಲಿ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿಯ ಸಮ್ಮಿಶ್ರ ಸರ್ಕಾರ ಇದೆ. ಮೈತ್ರಿ ಪಕ್ಷವಾದ ಕಾಂಗ್ರೆಸ್‌ನವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯ ಗಳನ್ನು ಮಾಡುತ್ತೇವೆ’ ಎಂದರು.

ADVERTISEMENT

‘ಒಂದೇ ಕುಟುಂಬದ ಸಹೋದ ರದ್ವಯರನ್ನು(ಧರ್ಮೇಗೌಡ, ಭೋಜೇಗೌಡ) ವಿಧಾನ ಪರಿಷತ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ. ಇಂಥ ಆಯ್ಕೆ ಅಪರೂಪ. ಪಕ್ಷದ ನಾಯಕತ್ವ ಕೊರತೆಯನ್ನು ನೀಗಿಸುತ್ತೇವೆ. ಜಿಲ್ಲೆಯನ್ನು ಪ್ರಗತಿಪಥದಲ್ಲಿ ಕೊಂಡೊಯ್ಯಲು ಇಬ್ಬರೂ ಶ್ರಮಿಸುತ್ತೇವೆ. ಶಾಸಕರಾಗಿ ಕೆಲಸ ಮಾಡುವ ಬಹಳಷ್ಟು ಅವಕಾಶ ಇದೆ. ಸಚಿವ ಸ್ಥಾನದ ಆಕಾಂಕ್ಷಿಗಳಲ್ಲ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.