ADVERTISEMENT

ಶೃಂಗೇರಿ ಕ್ಷೇತ್ರ ಬಂದ್: ಭಾಗಶಃ ಯಶಸ್ವಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2014, 8:27 IST
Last Updated 11 ಫೆಬ್ರುವರಿ 2014, 8:27 IST
ಶೃಂಗೇರಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗಯಲ್ಲಿ ಸರ್ವಪಕ್ಷಗಳ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಶೃಂಗೇರಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗಯಲ್ಲಿ ಸರ್ವಪಕ್ಷಗಳ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.   

ಶೃಂಗೇರಿ: ಹಳದಿಎಲೆ ರೋಗಪೀಡಿತ ಅಡಿಕೆ ಬೆಳೆಗಾರರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಹಸಿರು ಹಾಗೂ ಸೇನೆ ಕರೆನೀಡಿದ್ದ ಸೋಮವಾರದ ಬಂದ್‌ಗೆ ಪಕ್ಷಾತೀತ ಬೆಂಬಲ ವ್ಯಕ್ತವಾಗುವುದರೊಂದಿಗೆ ಸಂಪೂರ್ಣ ಯಶಸ್ವಿಯಾಯಿತು.

ಬಂದ್‌ನ ಕಾರಣಕ್ಕಾಗಿ ಬೆಳಗಿನಿಂದಲೇ ಬಸ್‌, ಟ್ಯಾಕ್ಸಿ ಹಾಗೂ ಆಟೋಗಳು ರಸ್ತೆಗೆ ಇಳಿಯಲಿಲ್ಲ. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳು ಸೇರಿದಂತೆ ಅಂಚೆ ಕಚೇರಿ, ಬ್ಯಾಂಕ್‌ಗಳು, ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಮುಚ್ಚಿದ್ದವು. ಹೋಟೆಲ್‌ಗಳು ಮುಚ್ಚಿದ್ದ ಕಾರಣ ಪ್ರವಾಸಿಗರಿಗೆ ಬೆಳಗಿನ ಉಪಹಾರ ಲಭ್ಯವಾಗಲಿಲ್ಲ. ಬಂದ್‌ನ ಅಂಗವಾಗಿ ಕೆಲಕಾಲ ಹೆದ್ದಾರಿ ತಡೆ ನಡೆಸಿದ ರೈತ ಸಂಘದ ಕಾರ್ಯಕರ್ತರು ಖಾಸಗಿ ವಾಹನಗಳನ್ನು ತಡೆದು ನಿಲ್ಲಿಸಿದರು. 

ಇದೇ ಸಂದರ್ಭದಲ್ಲಿ ಪಟ್ಟಣದ ಬಸ್‌ ನಿಲ್ದಾಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಸರ್ವ ಪಕ್ಷಗಳು ಮುಖಂಡರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ನಂತರ ತಾಲ್ಲೂಕು ಕಚೇರಿ ಎದುರು ರೈತ ಸಂಘ ಹಾಗೂ ಹಸಿರು ಸೇನೆ ಕಳೆದ 15 ದಿನಗಳಿಂದ ನಡೆಸುತ್ತಿರು ಧರಣಿ ಸ್ಥಳಕ್ಕೆ ತೆರಳಲಾಯಿತು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.