ADVERTISEMENT

ಸಾಲ ಸದುಪಯೋಗ ಆರ್ಥಿಕ ಸಬಲತೆಗೆ ದಾರಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 5:55 IST
Last Updated 18 ಫೆಬ್ರುವರಿ 2012, 5:55 IST

ನರಸಿಂಹರಾಜಪುರ: ಸ್ವಸಹಾಯ ಸಂಘಗಳು ಸರ್ಕಾರ ದಿಂದ ಸಿಗುವ ಸಾಲ ಮತ್ತು ಸಹಾಯಧನವನ್ನು ಸದುಪ ಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಬೇಕೆಂದು ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಜೆ.ಜಿ.ನಾಗರಾಜ್ ತಿಳಿಸಿದರು.

ಇಲ್ಲಿನ ಗುರುಭವನದಲ್ಲಿ ಶುಕ್ರವಾರ ಕಾರ್ಪೊರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಪಂಚಾಯಿತಿ ಡಿ.ಆರ್.ಡಿ.ಎ ಕೋಶ ಇವರ ಆಶ್ರಯದಲ್ಲಿ ಕಳೆದೆರಡು ದಿನಗಳಿಂದ ಸ್ವರ್ಣ ಜಯಂತಿ ಗ್ರಾಮ ಸ್ವರೋಜ್‌ಗಾರ್ ಯೋಜನೆಯ ಫಲಾನುವಿಗಳಿಗೆ ನಡೆದ ಮಾಹಿತಿ ಅರಿವು ಮತ್ತು ತರಬೇತಿ ಶಿಬಿರದ ಮುಕ್ತಾಯ ಸಮಾರಂಭದಲ್ಲಿ  ಅವರು ಮಾತನಾಡಿದರು.

ಸಂಘಗಳು ಸಾಲ ಕೊಡುವಾಗ ಮರುಪಾವತಿ ಮಾಡುವವರಿಗೆ ಮಾತ್ರ ಸಾಲ ನೀಡಬೇಕು. ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ತಮ್ಮಳಗೆ ಮಾತುಕತೆ ಮೂಲಕ ಬಗೆಹರಿಸಿ ಕೊಳ್ಳ ಬೇಕು ಎಂದು ಸಲಹೆ ನೀಡಿದರು.ತಾಲ್ಲೂಕು ಪಂಚಾಯಿವತಿಯಿಂದ ಸ್ವಸಹಾಯ ಸಂಘಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.

ಕಾರ್ಪೊರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಸತ್ಯೇಶ್ ಮಾತನಾಡಿ, ಸ್ವಸಹಾಯ ಸಂಘಗಳ ಸದಸ್ಯರಲ್ಲಿ ಸುಪ್ತವಾಗಿರುವ ಪ್ರತಿಭೆ ಹೊರ ಹಾಕುವ ಪ್ರಯತ್ನದಿಂದ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುತ್ತದೆ.
 
ಇಲ್ಲಿ ಯಾವುದೇ ಸ್ವಉದ್ಯೋಗ ಕೈಗೊಳ್ಳುವಾಗ ಅದಕ್ಕೆ ಸಂಬಂಧಿಸಿದ ಯೋಜನೆ ರೂಪಿಸಿಕೊಳ್ಳಲು ಮೂಲ ಮಾಹಿತಿ ನೀಡಲಾಗುತ್ತದೆ. ಗ್ರಾಮೀಣ ಭಾಗದ ಜನರಿಗೆ ಸ್ವಉದ್ಯೋಗವಕಾಶಗಳನ್ನು ಕೈಗೊಳ್ಳಲು ಸರ್ಕಾರದಿಂದ ಬರುವ ಅನುದಾನ ಸುಪಯೋಗವಾಗಬೇಕಾದರೆ ಸ್ವಸಹಾಯ ಸಂಘಗಳಿಗೆ ತರಬೇತಿ ಅವಶ್ಯಕ. ಆ ನಿಟ್ಟಿನಲ್ಲಿ ಎಸ್‌ಜೆಎಸ್‌ಆರ್‌ವೈಯಲ್ಲಿ ತರಬೇತಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ ಎಂದರು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಪ್ರಭಾಕರ್ ಎಚ್.ಬಂಡಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಗೃಹ ಕೈಗಾರಿಕೆಗಳಿಗೆ ಆದ್ಯತೆ ನೀಡುವ ಸಲುವಾಗಿ ಎಸ್‌ಜೆಎಸ್‌ಆರ್‌ವೈ ಯೋಜನೆ ಅನುಷ್ಠಾನಗೊಳಿಸಲಾಗಿದೆ.
 
ಈ ಯೋಜನೆಯಲ್ಲಿ ಹೈನುಗಾರಿಕೆ, ಕಸೂತಿ, ಎರೆಹುಳು ಸಾಕಣೆ, ತಿಂಡಿ ತಿನಿಸುಗಳ ತಯಾರಿಕೆ ಮುಂತಾದ 27 ರೀತಿಯ ಉದ್ಯೋಗ ಮಾಡಲು ಅವಕಾಶವಿದ್ದು, ಮಹಿಳೆಯರು ತಮಗೆ ಯಾವ ವೃತ್ತಿ ಬರುತ್ತದೆಯೋ ಅದರಲ್ಲಿ ತೊಡಗಿಕೊಂಡು ಅನುದಾನ ಸದ್ಭಳಕೆ ಮಾಡಿ ಕೊಳ್ಳಿ ಎಂದು ಸಲಹೆ ನೀಡಿದರು.

ಸ್ವರ್ಣ ಜಯಂತಿ ಗ್ರಾಮ ಸ್ವರೋಜ್‌ಗಾರ್‌ಯೋಜನೆಯ ತಾಲ್ಲೂಕು ಸಂಯೋಜಕ ಮೊಗಣ್ಣಗೌಡ, ಗಾಯತ್ರಿ, ಸುಮತಿ, ರಘುಪತಿ ಇದ್ದರು.

ಇದೇ ಸಂದರ್ಭದಲ್ಲಿ ತರಬೇತಿಯಲ್ಲಿ ಭಾಗವಹಿಸಿದ 8 ಸಂಘಗಳ 120 ಸದಸ್ಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.