ADVERTISEMENT

ಸ್ವಾಸ್ಥ್ಯ ಭೀಮ-ಸದುಪಯೋಗಪಡಿಸಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2012, 9:55 IST
Last Updated 6 ಫೆಬ್ರುವರಿ 2012, 9:55 IST

ನರಸಿಂಹರಾಜಪುರ: ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಡಿಯಲ್ಲಿ ಚಿಕಿತ್ಸೆ ಪಡೆಯಲು ಜಿಲ್ಲೆಯ 18 ಆಸ್ಪತ್ರೆಗಳನ್ನು ಗುರುತಿಸಲಾಗಿದ್ದು, ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಹಾ ಯಕ ಕಾರ್ಮಿಕ ಆಯುಕ್ತ ಶ್ರೀವಳ್ಳಿ ತಿಳಿಸಿದರು.

ಇಲ್ಲಿನ ಮಿನಿ ವಿಧಾನ ಸೌಧದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆಯ ತಾಲ್ಲೂಕು ಮಟ್ಟದ ಕಾರ್ಯಾಗಾರದ ಉದ್ಘಾ ಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಯೋಜನೆಯಡಿಯಲ್ಲಿ ಗುರುತಿಸಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಸರ್ಕಾರವೇ ನೇರವಾಗಿ ಆಸ್ಪತ್ರೆಗೆ ಚಿಕಿತ್ಸಾ ವೆಚ್ಚವನ್ನು ಆನ್‌ಲೈನ್ ಮೂಲಕ ಭರಿಸುತ್ತದೆ. ಗರಿಷ್ಠ ರೂ.30ಸಾವಿರದವರೆಗೆ ಚಿಕಿತ್ಸಾ ವೆಚ್ಚ ನೀಡಲಾಗುವುದು. ಇದಕ್ಕಿಂತ ಹೆಚ್ಚಾದರೆ ಫಲಾನುಭವಿಯೇ ಭರಿಸಬೇಕಾಗುತ್ತದೆ. ಈ ಯೋಜನೆಯಡಿಯಲ್ಲಿ ನೀಡಲಾಗುವ ಕಾರ್ಡ್‌ನ ಅವಧಿ 1ವರ್ಷವಾಗಿದೆ. ಬಡವರ್ಗದವರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ ಎಂದರು.

ಇಸ್‌ಕೋಟೋಕಿ ಕಂಪೆನಿಯ ಕಲ್ಯಾಣಿ ಹೊಸಬಾಳಪ್ಪ ಮಾತನಾಡಿ ಸ್ವಾಸ್ಥ್ಯ ಬೀಮಾ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರಿಗೆ ಜಾರಿಗೆ ತಂದಿರುವ ಯೋಜನೆಯಾಗಿದೆ. ಇದಕ್ಕೆ ತಗಲುವ ವೆಚ್ಚದಲ್ಲಿ ಶೇಕಡ 75ರಷ್ಟು ಕೇಂದ್ರ ಹಾಗೂ ಶೇಕಡ 25ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ. 

ಯೋಜನೆಯಡಿಯಲ್ಲಿ 1085ಕ್ಕೂ ಹೆಚ್ಚಿನ ಕಾಯಿಲೆಗಳಿಗೆ ನಿಯೋಜಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಚಿಕಿತ್ಸಾ ಓಡಾಟ ವೆಚ್ಚಕ್ಕೆ ಪ್ರತಿ ಚಿಕಿತ್ಸಾ ಸಮಯದಲ್ಲಿ ರೂ. 100ನಂತೆ ಗರಿಷ್ಠ ರೂ. 1,000ದವರೆಗೆ ಹಣ ನೀಡಲಾಗುವುದು. ತಾಲ್ಲೂಕಿನಲ್ಲಿ 2002- 03ರಲ್ಲಿ ನಡೆಸಿದ ಸರ್ವ ಕುಟುಂಬ ಸಮೀಕ್ಷೆ ಪ್ರಕಾರ 5502 ಫಲಾನುಭವಿಗಳ ಕುಟುಂಬಗಳನ್ನು ಗುರುತಿಸಲಾಗಿದೆ.

ಸಾಮಾಜಿಕ, ಆರ್ಥಿಕ, ಜಾತಿಗಣತಿ ಮುಗಿದ ನಂತರ ಹೊಸ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ರತ್ನಮ್ಮ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಸುರೇಶ್‌ವಹಿಸಿದ್ದರು. ತಹಸೀಲ್ದಾರ್ ಎಚ್.ಜಯ, ಪ್ರಸನ್ನ, ಪುಟ್ಟಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.