ADVERTISEMENT

ಚಿಕ್ಕಮಗಳೂರು: ಒಂದೂವರೆ ವರ್ಷದಲ್ಲಿ 173 ಪೋಕ್ಸೊ ಪ್ರಕರಣ

ಗರ್ಭಿಣಿಯರಾಗಿದ್ದ 28 ಬಾಲಕಿಯರು: 12 ಬಾಲಕಿಯರಿಗೆ ಹೆರಿಗೆ

ವಿಜಯಕುಮಾರ್ ಎಸ್.ಕೆ.
Published 13 ಆಗಸ್ಟ್ 2023, 7:33 IST
Last Updated 13 ಆಗಸ್ಟ್ 2023, 7:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆ ಜಾರಿಯಲ್ಲಿದ್ದರೂ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಜಿಲ್ಲೆಯಲ್ಲಿ ಕಡಿಮೆಯಾಗಿಲ್ಲ. ಒಂದೂವರೆ ವರ್ಷದ ಅವಧಿಯಲ್ಲಿ 173 ಪ್ರಕರಣಗಳು ದಾಖಲಾಗಿವೆ.

2022ರಲ್ಲಿ 123 ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷ(2023) ಏಳು ತಿಂಗಳಲ್ಲಿ 50 ಪ್ರಕರಣಗಳು ದಾಖಲಾಗಿವೆ.

2022ರಲ್ಲಿ ದಾಖಲಾದ 123 ಪ್ರಕರಣಗಳಲ್ಲಿ 3 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಿದೆ. 16 ಪ್ರಕರಣಗಳು ಖುಲಾಸೆಯಾಗಿದ್ದು, 93 ಪ್ರಕರಣಗಳ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. ಒಂದು ಪ್ರಕರಣ ತನಿಖಾ ಹಂತದಲ್ಲಿದ್ದರೆ, 10 ಪ್ರಕರಣಗಳು ಬೇರೆ ಜಿಲ್ಲೆಗೆ ವರ್ಗಾವಣೆಗೊಂಡಿವೆ.

ADVERTISEMENT

2023ರಲ್ಲಿ ದಾಖಲಾದ 50 ಪ್ರಕರಣಗಳಲ್ಲಿ 30 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. 16 ಪ್ರಕರಣಗಳು ತನಿಖಾ ಹಂತದಲ್ಲಿದ್ದು, 4 ಪ್ರಕರಣಗಳು ಬೇರೆ ಜಿಲ್ಲೆಗೆ ವರ್ಗಾವಣೆಗೊಂಡಿವೆ.

2022ರ ಏಪ್ರಿಲ್‌ನಿಂದ 2023ರ ಮಾರ್ಚ್‌ ತನಕ ಒಂದು ವರ್ಷದ ಅವಧಿಯಲ್ಲಿ ದಾಖಲಾದ ಪೋಕ್ಸೊ ಪ್ರಕರಣದಲ್ಲಿ 22 ಬಾಲಕಿಯರು ಗರ್ಭಿಣಿಯರಾಗಿದ್ದು, 12 ಪ್ರಕರಣಗಳಲ್ಲಿ ಗರ್ಭಪಾತ ಮಾಡಿಸಲಾಗಿದೆ. 10 ಬಾಲಕಿಯರಿಗೆ ಹೆರಿಗೆಯಾಗಿದೆ. 2023ರ ಮಾರ್ಚ್‌ನಿಂದ ಈವರೆಗೆ ದಾಖಲಾದ ಪೋಕ್ಸೊ ಪ್ರಕರಣದಲ್ಲಿ 6 ಬಾಲಕಿಯರು ಗರ್ಭಿಣಿಯರಾಗಿದ್ದು, ನಾಲ್ಕು ಬಾಲಕಿಯರ ಗರ್ಭಪಾತ ಮಾಡಿಸಲಾಗಿದೆ. ಎರಡು ಬಾಲಕಿಯರಿಗೆ ಹೆರಿಗೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಕಿ –ಅಂಶಗಳು ಹೇಳುತ್ತವೆ.

‘ಬಹುತೇಕ ಪ್ರಕರಣಗಳು ವಲಸೆ ಕಾರ್ಮಿಕರ ಟೆಂಟ್‌ಗಳಲ್ಲಿ ನಡೆಯುತ್ತಿವೆ. ಹೊರ ರಾಜ್ಯಗಳಿಂದ ಬರುವ ಕಾರ್ಮಿಕರು ಅಲ್ಲಿನ ಮಕ್ಕಳ ಮೇಲೆಯೇ ದೌರ್ಜನ್ಯ ನಡೆಸಿರುವುದು ಹೆಚ್ಚು. ಅವರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ಇಲಾಖೆ ಮಾಡುತ್ತಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.