ADVERTISEMENT

ಕಡೂರು: 2.5 ಟನ್ ಅಕ್ರಮ ರಾಗಿ ವಶ

​ಪ್ರಜಾವಾಣಿ ವಾರ್ತೆ
Published 23 ಜನವರಿ 2024, 13:39 IST
Last Updated 23 ಜನವರಿ 2024, 13:39 IST
ಕಡೂರು ತಾಲ್ಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ರಾಗಿಯನ್ನು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಆಹಾರ ಇಲಾಖೆಯ ನಿರೀಕ್ಷಕ ಶ್ರೀನಿವಾಸ್ ನೇತೃತ್ವದ ಅಧಿಕಾರಿಗಳ ತಂಡ ವಶಕ್ಕೆ ಪಡೆಯಿತು
ಕಡೂರು ತಾಲ್ಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ರಾಗಿಯನ್ನು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಆಹಾರ ಇಲಾಖೆಯ ನಿರೀಕ್ಷಕ ಶ್ರೀನಿವಾಸ್ ನೇತೃತ್ವದ ಅಧಿಕಾರಿಗಳ ತಂಡ ವಶಕ್ಕೆ ಪಡೆಯಿತು   

ಕಡೂರು: ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 2.5 ಟನ್ ರಾಗಿಯನ್ನು ಆಹಾರ ಇಲಾಖೆ ಅಧಿಕಾರಿಗಳ ತಂಡವು ತಾಲ್ಲೂಕಿನ ಚಿಕ್ಕನಲ್ಲೂರಿನಲ್ಲಿ ಶನಿವಾರ ವಶಕ್ಕೆ ಪಡೆದಿದೆ.

ಸರ್ಕಾರದಿಂದ ಸಾರ್ವಜನಿಕರಿಗೆ ವಿತರಿಸುವ ಪಡಿತರ ರಾಗಿಯನ್ನು ಅಕ್ರಮ ದಾಸ್ತಾನು ಮಾಡಿ, ಆ ರಾಗಿಗೆ ಕನಿಷ್ಠ ಬೆಂಬಲ ಯೋಜನೆಯಲ್ಲಿ ಮಾರಾಟ ಮಾಡಿ ಸರ್ಕಾರಕ್ಕೆ ವಂಚಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕನಲ್ಲೂರು ಗ್ರಾಮದ ಕಾಡಪ್ಪರ ರಾಜಣ್ಣ ಮತ್ತು ಸಿ.ಕೆ. ನಾಗರಾಜ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಗಿ ಮೌಲ್ಯ ₹9.48 ಲಕ್ಷ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಆಹಾರ ಇಲಾಖೆ ಉಪನಿರ್ದೇಶಕ ಎ.ಬಿ. ಸಂಜಯ್ ಭೇಟಿ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.