ADVERTISEMENT

ವಿಶ್ವ ಪರಿಸರ ದಿನಾಚರಣೆ| ‘ಧರ್ಮಸ್ಥಳ ಯೋಜನೆ: 3.12 ಕೋಟಿ ಗಿಡ ನಾಟಿ’

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 13:57 IST
Last Updated 6 ಜೂನ್ 2025, 13:57 IST
ನರಸಿಂಹರಾಜಪುರ ತಾಲ್ಲೂಕು ಬಿ.ಎಚ್.ಕೈಮರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಪರಿಸರ ದಿನ ಆಚರಿಸಲಾಯಿತು
ನರಸಿಂಹರಾಜಪುರ ತಾಲ್ಲೂಕು ಬಿ.ಎಚ್.ಕೈಮರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಪರಿಸರ ದಿನ ಆಚರಿಸಲಾಯಿತು   

ಬಿ.ಎಚ್.ಕೈಮರ(ಎನ್.ಆರ್.ಪುರ): ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾಲ್ಕು ದಶಕಗಳಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ‘ಭೂಮಿಯನ್ನು ರಕ್ಷಿಸಿ ಹಾಗೂ ಮುಂದಿನ ಪೀಳಿಗೆಗೆ ಹಸ್ತಾಂತರಿಸಿ’ ಎಂಬ ಅಭಿಯಾನದಡಿ 1.74 ಲಕ್ಷ ಎಕರೆ ಪ್ರದೇಶದಲ್ಲಿ 3.13 ಕೋಟಿ ಗಿಡಗಳನ್ನು ನೆಡಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಹನುಮಂತಪ್ಪ ಹೇಳಿದರು.

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸಾಮಾಜಿಕ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ವರುಣ ಶೆಟ್ಟಿ ಮಾತನಾಡಿ, ಮಕ್ಕಳಲ್ಲಿ ಪರಿಸರದ ಬಗ್ಗ ಜಾಗೃತಿ ಮೂಡಿಸಬೇಕು. ಪ್ರತಿ ವರ್ಷ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪರಿಸರದ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಿದರೆ ಮುಂದಿನ ಪೀಳಿಗೆಗೆ ಭೂಮಿ ಉಳಿಯಲಿದೆ ಎಂದರು.

ADVERTISEMENT

ಧರ್ಮಸ್ಥಳ ಯೋಜನೆಯ ಬಿ.ಎಚ್.ಕೈಮರ ವಲಯ ಮೇಲ್ವಿಚಾರಕ ತೀರ್ಥರಾಜ್, ಶಾಲೆಯ ಮುಖ್ಯ ಶಿಕ್ಷಕಿ ವೀಣಾ, ಯೋಜನೆಯ ಸೇವಾ ಪ್ರತಿನಿಧಿಗಳು, ಸ್ವಸಹಾಯ ಸಂಘದ ಸದಸ್ಯರು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ನಂತರ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.