ADVERTISEMENT

ಚಿಕ್ಕಮಗಳೂರು: ಹುಲಿ ಸಂರಕ್ಷಿತ ಪ್ರದೇಶದಲ್ಲಿ 43 ಎಕರೆ ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 23:30 IST
Last Updated 3 ಜೂನ್ 2025, 23:30 IST
ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒತ್ತುವರಿ ತೆರವುಗೊಳಿಸಿದ ಅರಣ್ಯ ಸಿಬ್ಬಂದಿ
ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒತ್ತುವರಿ ತೆರವುಗೊಳಿಸಿದ ಅರಣ್ಯ ಸಿಬ್ಬಂದಿ   

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮುತ್ತೋಡಿ ಅರಣ್ಯದಲ್ಲಿ ಒತ್ತುವರಿ ಮಾಡಿದ್ದ 43 ಎಕರೆ ಜಾಗವನ್ನು ಅರಣ್ಯ ಇಲಾಖೆ ತೆರವುಗೊಳಿಸಿ ವಶಕ್ಕೆ ಪಡೆದಿದೆ.

ಭದ್ರಾ ಅರಣ್ಯ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿರುವ ಬಗ್ಗೆ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಚಿಕ್ಕಮಗಳೂರು ನ್ಯಾಯಾಲಯದಲ್ಲಿ ಅರಣ್ಯ ಇಲಾಖೆ ಮೊಕದ್ದಮೆ ದಾಖಲಿಸಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಷ್ಟೂ ಜಾಗದ ಒತ್ತುವರಿ ತೆರವುಗೊಳಿಸಿ ವಶಕ್ಕೆ ಪಡೆಯಲು ಏ.28ರಂದು ಆದೇಶ ನೀಡಿತ್ತು.

ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಕಾರಿ ಯಶಪಾಲ್ ಕ್ಷೀರಸಾಗರ ಮಾರ್ಗದರ್ಶನದಲ್ಲಿ 100ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಮೂರು ದಿನ ನಿರಂತರ ಕಾರ್ಯಾಚರಣೆ ನಡೆಸಿ, ಒತ್ತುವರಿ ಜಾಗದಲ್ಲಿ ಬೆಳೆದಿದ್ದ ಕಾಫಿ ಗಿಡಗಳನ್ನು ತೆರವುಗೊಳಿಸಿದರು.

ADVERTISEMENT

ಭದ್ರಾ ಹುಲಿ ಸಂರಕ್ಷಿತ ಯೋಜನೆಯ ಉಪಅರಣ್ಯ ಸಂರಕ್ಷಣಾಧಿಕಾರಿ ಪುಲ್ಕಿತ್ ಮೀನಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರಸ್ವಾಮಿ, ವಲಯ ಅರಣ್ಯಾಧಿಕಾರಿ ಜಗದೀಶ್ ಮೇದ, ಗೌರವ್, ಸುಧಾಕರ ಕಾರ್ಯಚರಣೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.