ಹೃದಯಾಘಾತ
ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ): ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿ ಮಧುಸೂದನ್ (57) ಹೃದಯಾಘಾತದಿಂದ ಶನಿವಾರ ಇಲ್ಲಿ ಮೃತಪಟ್ಟಿದ್ದಾರೆ.
12 ಮಂದಿ ಸ್ನೇಹಿತರೊಂದಿಗೆ ಮಧುಸೂದನ್ ಟಿಟಿ ವಾಹನದಲ್ಲಿ ಧರ್ಮಸ್ಥಳದತ್ತ ಸಾಗುತ್ತಿದ್ದರು. ಕೊಟ್ಟಿಗೆಹಾರದಲ್ಲಿ ವಾಹನವನ್ನು ನಿಲ್ಲಿಸಲಾಗಿತ್ತು. ಈ ವೇಳೆ ಶೌಚಾಲಯಕ್ಕೆ ತೆರಳಿದ್ದ ಮಧುಸೂದನ್ ಕುಸಿದು ಬಿದ್ದಿದ್ದರು. ಸ್ನೇಹಿತರು ಮತ್ತು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಿ ಮಧುಸೂದನ್ ಮೃತಪಟ್ಟಿದ್ದರು ಎಂದು ಬಣಕಲ್ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.