ಮೂಡಿಗೆರೆ: ಕಾಂಗ್ರೆಸ್ ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಂಡಿರುವ ವಿಧಾನಪರಿಷತ್ ನೂತನ ಸದಸ್ಯೆ ಆರತಿ ಕೃಷ್ಣ ಅವರ ಅಭಿನಂದನಾ ಸಮಾರಂಭಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಲಾಗಿದೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಚ್.ಜಿ.ಸುರೇಂದ್ರ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 'ನಮ್ಮ ಜಿಲ್ಲೆಯವರಾದ ಮಾಜಿ ಶಾಸಕ ಬೇಗಾನೆ ರಾಮಯ್ಯ ಅವರ ಪುತ್ರಿ ಆರತಿಕೃಷ್ಣ ವಿಧಾನಪರಿಷತ್ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದು, ಅವರಿಗೆ ಕಾಂಗ್ರೆಸ್ ತಾಲ್ಲೂಕು ಘಟಕದ ವತಿಯಿಂದ ಶಾಸಕಿ ನಯನಾ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಕಳೆದ ಶನಿವಾರ ಕಾಂಗ್ರೆಸ್ ನಿಯೋಗ ಬೆಂಗಳೂರಿನ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿಯಾಗಿ ಆಹ್ವಾನ ನೀಡಲಾಯಿತು. ಉಪಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ಸೂಚಿಸಿದ್ದು, ಅವರ ಅನುಕೂಲ ದಿನಾಂಕವನ್ನು ಪರಿಗಣಿಸಿ ನವೆಂಬರ್‌ನಲ್ಲಿ ಕಾರ್ಯಕ್ರಮ ನಿಗದಿ ಮಾಡಲಾಗುವುದು' ಎಂದರು.
ನಿಯೋಗದಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಬಿ.ನಿಂಗಯ್ಯ, ಎಂ.ಪಿ.ಕುಮಾರಸ್ವಾಮಿ, ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಎಸ್. ಜಯರಾಂ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಪಿ. ಮನು, ಮುಖಂಡರಾದ ಪಿ.ಆರ್.ವಿನಯ ಕುಮಾರ್, ಸಿ.ಕೆ.ಇಬ್ರಾಹಿಂ, ಪಿ.ಆರ್.ವಿನಯಕುಮಾರ್, ಇಮ್ತಿಯಾಜ್, ಎ.ಸಿ. ಅಯೂಬ್, ಉಮ್ಮರ್, ಬಣಕಲ್ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಇರ್ಫಾನ್, ಮಜೀದ್, ಇಮ್ರಾನ್, ನಿಖಿಲ್ ಚಕ್ರವರ್ತಿ ಮುಂತಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.