ADVERTISEMENT

ಸಾಮೂಹಿಕ ಅತ್ಯಾಚಾರ ಆರೋಪಿಗಳಿಗೆ ಮರಣ ದಂಡನೆ ವಿಧಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2019, 14:12 IST
Last Updated 30 ನವೆಂಬರ್ 2019, 14:12 IST
ಚಿಕ್ಕಮಗಳೂರಿನಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರಿನಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಚಿಕ್ಕಮಗಳೂರು: ಹೈದರಾಬಾದ್‌ನಲ್ಲಿ ಪಶು ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ನಡೆಸಿರುವ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಆರೋಪಿಗಳ ವಿರುದ್ಧ ಘೋಷಣೆ ಕೂಗಿದರು.
ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಜೀವಂತವಾಗಿ ಬೆಂಕಿ ಹಚ್ಚಿ ಹತ್ಯೆ ಮಾಡಿರುವುದು ಅಮಾನವೀಯ ಕೃತ್ಯ. ಈ ವಿಕೃತ ಮನೋಭಾವದ ಆರೋಪಿಗಳು ಸಮಾಜಕ್ಕೆ ಮಾರಕವಾಗಿದ್ದಾರೆ. ಅವರಿಗೆ ತ್ವರಿತ ನ್ಯಾಯಾಲಯದ ಮೂಲಕ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿದರು.

ತೆಲಂಗಾಣದ ಗೃಹ ಸಚಿವರು ಯುವತಿ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು, ಮಾಧ್ಯಮಗಳಿಗೆ ಆಕ್ಷೇಪಣಾರ್ಹವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.

ADVERTISEMENT

ಸಂಘಟನೆಯ ಶಶಿ ಆಲ್ದೂರು, ಪ್ರಸನ್ನ, ಪ್ರತಿನ್ ಕಟ್ಟೆಗದ್ದೆ, ಹರ್ಷಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.