ಚಿಕ್ಕಮಗಳೂರು:ಕೋರ್ಟ್ ತೀರ್ಪು ಬಂದ ನಂತರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದುಪಡಿಸಿ ಲೋಕಾಯುಕ್ತ ಬಲಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಮಠದಲ್ಲಿ ಮಾತನಾಡಿದ ಅವರು, ಗೊಂದಿ ಹಳ್ಳ ನೀರಾವರಿ ಯೋಜನೆಗೆ ಹಂತಹಂತವಾಗಿ ಅನುದಾನ ಘೋಷಿಸಲಾಗುವುದು. ಇದಕ್ಕೆ ಬಜೆಟ್ ನಲ್ಲಿ ಪ್ರತ್ಯೇಕವಾಗಿ ಅನುದಾನ ಒದಗಿಸಿಲ್ಲ ಎಂದು ಪ್ರತಿಕ್ರಿಯಿಸಿದರು.
ಕಾಫಿ ಬೆಳೆಗಾರರು ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲ ಮೇಲಿನ ಬಡ್ಡಿ ಶೇ 5 ರಿಯಾಯಿತಿಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ ಎಂದು ಉತ್ತರಿಸಿದರು.
ಸಚಿವ ಸಿ.ಟಿ.ರವಿ, ಸಂಸದೆ ಶೋಭಾ ಕರಂದ್ಲಾಜೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.