ADVERTISEMENT

ಲಂಚ: ಎಸಿಬಿ ಬಲೆಗೆ ನಗರಾಭಿವೃದ್ಧಿ ಪ್ರಾಧಿಕಾರ ಅಧಿಕಾರಿ, ಮಧ್ಯವರ್ತಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 15:17 IST
Last Updated 8 ಏಪ್ರಿಲ್ 2022, 15:17 IST
ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ನಿರ್ದೇಶಕ ಶಿವಕುಮಾರ್‌ (ಎಡ) , ಮಧ್ಯವರ್ತಿ ರಮೇಶ್‌
ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ನಿರ್ದೇಶಕ ಶಿವಕುಮಾರ್‌ (ಎಡ) , ಮಧ್ಯವರ್ತಿ ರಮೇಶ್‌    

ಚಿಕ್ಕಮಗಳೂರು: ಬಡಾವಣೆ ಅಭಿವೃದ್ಧಿಗೆ ಅನುಮತಿ ನೀಡಲು ಲಂಚ ಪಡೆದ ಪ್ರಕರಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ನಿರ್ದೇಶಕ ಶಿವಕುಮಾರ್‌, ಮಧ್ಯವರ್ತಿ ರಮೇಶ್‌ ಅವರು ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬಡಾವಣೆ ಅಭಿವೃದ್ಧಿಗೆ ಅನುಮತಿ ನೀಡಲು ಶಿವಕುಮಾರ್‌ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಗೋವಿಂದರಾಜು ಎಂಬವರು ಎಸಿಬಿಗೆ ದೂರು ನೀಡಿದ್ದರು. ಶಿವಕುಮಾರ್‌ ಪರವಾಗಿ ಮಧ್ಯವರ್ತಿ ರಮೇಶ್‌ ಎಂಬವರು ಗೋವಿಂದರಾಜು ಅವರಿಂದ ₹ 2 ಲಕ್ಷ ಹಣ ಪಡೆಯುವಾಗ ಸಿಕ್ಕಿಬಿದ್ದರು ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT