ಅಪಘಾತ
–ಪ್ರಾತಿನಿಧಿಕ ಚಿತ್ರ
ಶೃಂಗೇರಿ: ಶೃಂಗೇರಿ ತಾಲ್ಲೂಕಿನ ಮರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ಲೇಮನೆ ಕೊಡಿಗೆಯ ಯುವತಿ ರಕ್ಷಿತಾ 16 ವರ್ಷ ಕಿಗ್ಗಾದ ಗಂಡಘಟ್ಟ ಸಮೀಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಕ್ಷಿತಾ ಸೋಮವಾರ ತರಗತಿಗಳು ಆರಂಭವಾಗುವ ಕಾರಣ ನೆರಳಕೊಡಿಗೆಯ ವಸತಿ ನಿಲಯಕ್ಕೆ ಅಣ್ಣನ ಜೊತೆಗೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಎರ್ಟಿಗಾ ಕಾರು ಡಿಕ್ಕಿ ಹೊಡೆದಿದೆ. ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.