ಸಂಜು(33) ಮೃತ ಯುವಕ
ಚಿಕ್ಕಮಗಳೂರು: ತಾಲ್ಲೂಕಿನ ಉಲುವಾಗಿಲು ಬಳಿ ಶಿಕಾರಿಗೆ ತೆರಳಿದ್ದ ಯುವಕನಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾನೆ.
ಕೆರೆಮಕ್ಕಿ ಗ್ರಾಮದ ಸಂಜು(33) ಮೃತ ಯುವಕ. ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪಿನಲ್ಲಿ ಒಬ್ಬರು ಹಾರಿಸಿದ ಗುಂಡು ಯುವಕನಿಗೆ ಬಿದ್ದಿದೆ.
ಎದೆಯ ಭಾಗಕ್ಕೆ ಗುಂಡು ತಗುಲಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.