ಚಿಕ್ಕಮಗಳೂರು: ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪಾಲಕರ ಸಹಕಾರವಿದ್ದರೆ ಯಾವುದೇ ಕ್ಷೇತ್ರದಲ್ಲೂ ಸ್ಥಾನಮಾನ ಗಳಿಸಬಹುದು ಎಂದು ಯುರೇಕಾ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ದೀಪಕ್ ದೊಡ್ಡಯ್ಯ ಹೇಳಿದರು.
ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕಗಳಿಸಿದ ಬಸ್ಕಲ್ ಗ್ರಾಮದ ವಿದ್ಯಾರ್ಥಿ ಕುನಾಲ್ ರವಿರೇಜಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.
ಶಿಕ್ಷಕರ ಪ್ರೋತ್ಸಾಹ, ಪಾಲಕರ ಸಹಕಾರವಿದ್ದರೆ ಸಮಾಜದ ಮುಖ್ಯ ವ್ಯಕ್ತಿಯಾಗಿ ರೂಪುಗೊಳ್ಳಬಹುದು. ಹೀಗಾಗಿ ಆಸಕ್ತಿಯಿರುವ ಕ್ಷೇತ್ರದಲ್ಲಿ ಮಕ್ಕಳಿಗೆ ಪ್ರೋತ್ಸಾಹಿಸಬೇಕು ಪೋಷಕರಿಗೆ ಸಲಹೆ ನೀಡಿದರು.
ಕುನಾಲ್ ರವಿತೇಜ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವುದು ಹೆಮ್ಮೆಯ ಸಂಗತಿ. ಪ್ರತಿಯೊಬ್ಬ ವಿದ್ಯಾರ್ಥಿಗಳು ಗುರಿ ಹೊಂದುವ ಜೊತೆಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ ಸಂಗತಿ ಎಂದರು.
ವಿದ್ಯಾರ್ಥಿಯ ಪೋಷಕರಾದ ಮಮತಾ ರವಿಕುಮಾರ್, ಜೆಡಿಎಸ್ ಮುಖಂಡ ಭೈರೇಗೌಡ, ಮುಖಂಡರಾದ ಸಚಿನ್‌ಸಿಂಗ್, ಶಶಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.