ADVERTISEMENT

‘ಕಂಪನಿಗೆ ಅನುಕೂಲ ಮಾಡುವ ಹುನ್ನಾರ’

ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 5:23 IST
Last Updated 9 ಡಿಸೆಂಬರ್ 2020, 5:23 IST
ಹೊಸ ಕೃಷಿ ಕಾಯ್ದೆಗಳು ಮತ್ತು ವಿದ್ಯುತ್ ಖಾಸಗೀಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಶೃಂಗೇರಿ ತಾಲ್ಲೂಕು ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಮತ್ತು ವಿವಿಧ ಸಂಘಟನೆಗಳಿಂದ ಮಂಗಳವಾರ ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅಂಬುಜಾ ಅವರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು (ಎಡಚಿತ್ರ). ಕೊಪ್ಪ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ತಹಶೀಲ್ದಾರ್ ಪರಮೇಶ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಹೊಸ ಕೃಷಿ ಕಾಯ್ದೆಗಳು ಮತ್ತು ವಿದ್ಯುತ್ ಖಾಸಗೀಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಶೃಂಗೇರಿ ತಾಲ್ಲೂಕು ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಮತ್ತು ವಿವಿಧ ಸಂಘಟನೆಗಳಿಂದ ಮಂಗಳವಾರ ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅಂಬುಜಾ ಅವರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು (ಎಡಚಿತ್ರ). ಕೊಪ್ಪ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ತಹಶೀಲ್ದಾರ್ ಪರಮೇಶ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.   

ಕೊಪ್ಪ: ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಶೃಂಗೇರಿ ಕ್ಷೇತ್ರ ರೈತ ಸಂಘ ಹಾಗೂ ಹಸಿರು ಸೇನೆ ತಹಶೀಲ್ದಾರ್ ಪರಮೇಶ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

‘ಕೃಷಿ ಸಂಬಂಧಿತ ಭೂಕಾಯ್ದೆ ತಿದ್ದುಪಡಿಗಳಿಂದ ನಮ್ಮ ರೈತಾಪಿ ವರ್ಗ ಹಾಗೂ ಮಾರುಕಟ್ಟೆಗಳು ಖಾಸಗಿ ವ್ಯಾಪಾರಿಗಳ ಮತ್ತು ಕಾರ್ಪೊರೇಟ್ ಸಂಸ್ಥೆಗಳ ನಿಯಂತ್ರಣ ಕ್ಕೆ ಒಳಗಾಗುತ್ತಿವೆ’ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಕ್ಷೇತ್ರ ರೈತ ಸಂಘದ ಕಾರ್ಯಾಧ್ಯಕ್ಷ ನವೀನ್ ಕರುವಾನೆ, ಹಸಿರುಸೇನೆ ಅಧ್ಯಕ್ಷ ಬಿ.ಪಿ.ಚಿಂತನ್ ಬೆಳಗೊಳ, ಪಟ್ಟಣ ಪಂಚಾಯಿತಿ ಸದಸ್ಯ ರಷೀದ್, ಚಂದ್ರಶೇಖರ್, ಈವನ್ ಜೋಯಲ್, ಪ್ರಶಾಂತ್, ಅಂಜನ್ ಇದ್ದರು.

ADVERTISEMENT

ಸರ್ಕಾರಕ್ಕೆ ಮನವಿ

‌ಶೃಂಗೇರಿ: ರೈತ ವಿರೋಧಿ ಕಾಯ್ದೆ ಮತ್ತು ವಿದ್ಯುತ್ ಖಾಸಗೀರಣಗೊಳಿಸುವುದನ್ನು ವಿರೋಧಿಸಿಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದಿಂದ ಶೃಂಗೇರಿ ತಹಶೀಲ್ದಾರ್ ಅಂಬುಜಾ ಅವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರೈತ ಸಂಘದ ಅಧ್ಯಕ್ಷ ಕಾನೋಳ್ಳಿ ಚಂದ್ರಶೇಖರ್ ಮಾತನಾಡಿ, ‘1972ರಲ್ಲಿ ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ರೈತರ ಪರವಾಗಿತ್ತು. ಪ್ರಸ್ತುತ ಭೂ ಸುಧಾರಣೆ ತಿದ್ದುಪಡಿಯಿಂದ ಉಳ್ಳವರು ಹಾಗೂ ಇಲ್ಲದವರ ನಡುವೆ ಕೋಲಾಹಲವನ್ನು ಸೃಷ್ಟಿಸಿ, ರೈತರ ಮರಣ ಶಾಸನಕ್ಕೆ ಸರ್ಕಾರ ಮುನ್ನುಡಿ ಬರೆಯುತ್ತಿದೆ’ ಎಂದು ಆರೋಪಿಸಿದರು.

ರೈತ ಸಂಘದ ಉಪಾಧ್ಯಕ್ಷ ಎಂ.ಎಸ್ ಚೆನ್ನಕೇಶವ ಮಾತನಾಡಿದರು.

ರೈತ ಸಂಘದ ಕಾರ್ಯಧ್ಯಕ್ಷ ಮೆಣಸೆ ಅನಂತಯ್ಯ ಮಾತನಾಡಿದರು. ರೈತ ಸಂಘದ ಪದಾಧಿಕಾರಿಗಳಾದ ಯೋಗಪ್ಪ ನರ್ಕುಳಿ, ಅತ್ತುಳ್ಳಿ ಧರ್ಮಪ್ಪ, ಕಲ್ಲಾಳಿ ನಾಗೇಶ್, ಪ್ರಶಾಂತ್, ಮುರುಳಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.