ADVERTISEMENT

ಅಜ್ಜಂಪುರ | ಬೆಟ್ಟಿಂಗ್: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 30 ಮೇ 2025, 16:28 IST
Last Updated 30 ಮೇ 2025, 16:28 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಅಜ್ಜಂಪುರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಪಟ್ಟಣ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ ಸಾಗರ್, ಗಗನ್ ಎಸ್. ಜಾದವ್ ಹಾಗೂ ಗಗನ್ ಎಸ್. ದೇವಾಂಗ ಎಂಬುವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಬೆಟ್ಟಿಂಗ್‌ಗೆ ಬಳಸಿದ್ದ ₹38 ಸಾವಿರ ನಗದು, ಕಾರು, ನಾಲ್ಕು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಉಡುಪಿ ರಾಘವೇಂದ್ರ ಅಲಿಯಾಸ್ ರಾಘು ಶೆಟ್ಟಿ ಬಂಧನಕ್ಕೆ ಪೊಲೀಸರು ತಂಡ ರಚಿಸಿದ್ದಾರೆ.

ADVERTISEMENT

ಪಟ್ಟಣ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ವೀರೇಂದ್ರ, ಪಿಎಸ್ಐ ತಿಪ್ಪೇಶ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.