ADVERTISEMENT

ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಗಂಗಾಧರಪ್ಪ

ಅಜ್ಜಂಪುರ: ತಾಲ್ಲೂಕು ಪಂಚಾಯಿತಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 11:11 IST
Last Updated 14 ಸೆಪ್ಟೆಂಬರ್ 2020, 11:11 IST
ಅಜ್ಜಂಪುರದ ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಎಂ.ಗಂಗಾಧರಪ್ಪ ಅವರನ್ನು ಇತರ ಸದಸ್ಯರು ಅಭಿನಂದಿಸಿದರು.
ಅಜ್ಜಂಪುರದ ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಎಂ.ಗಂಗಾಧರಪ್ಪ ಅವರನ್ನು ಇತರ ಸದಸ್ಯರು ಅಭಿನಂದಿಸಿದರು.   

ಅಜ್ಜಂಪುರ: ಇಲ್ಲಿನ ತಾಲ್ಲೂಕು ಪಂಚಾಯಿತಿಗೆ ಸ್ಥಾಯಿ ಸಮಿತಿ ರಚನೆ ಪ್ರಕ್ರಿಯೆ ಸೋಮವಾರ ನಡೆಯಿತು.

ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಬಿ.ಎಂ. ಗಂಗಾಧರಪ್ಪ, ಸದಸ್ಯರಾಗಿ ಭಾರತಮ್ಮ ಪ್ರಹ್ಲಾದ್, ಪ್ರತಿಮಾ ಸೋಮಶೇಖರ್ ಆಯ್ಕೆಯಾದರು. ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಮಂಜುನಾಥ್, ಸದಸ್ಯರಾಗಿ ಆರ್. ಕೃಷ್ಣಪ್ಪ, ಪ್ರೇಮಾ ಕೃಷ್ಣಮೂರ್ತಿ ಮತ್ತು ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆ.ಪಿ. ಸುರೇಶ್ ಕುಮಾರ್, ಸದಸ್ಯರಾಗಿ ನಂಜುಂಡಪ್ಪ, ಸುಚಿತ್ರಾ ಬಾಬು ಆಯ್ಕೆಯಾದರು.

ಬಳಿಕ ಮಾತನಾಡಿದ ಬಿ.ಎಂ. ಗಂಗಾಧರಪ್ಪ, ‘ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ಷೇಮಾಭಿವೃದ್ಧಿಗೆ ಶ್ರಮಿಸಲಾಗುವುದು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ನ್ಯಾಯಯುತವಾಗಿ ದೊರೆಯುವಂತೆ ನೋಡಿಕೊಳ್ಳಲಾಗುವುದು’ ಎಂದರು.

ADVERTISEMENT

ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ. ಸುರೇಶ್ ಕುಮಾರ್, ‘ನೂತನ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಆಗಬೇಕಿದೆ’ ಎಂದರು.

ತಾಲ್ಲೂಕು ಪಂಚಾಯಿತಿ ಇಒ ರಾಮ್ ಕುಮಾರ್, ಮಲ್ಲಿಕಾರ್ಜುನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.