ADVERTISEMENT

ಚಿಕ್ಕಮಗಳೂರು: ಅಜ್ಜಂಪುರ ಪಟ್ಟಣ ಪಂಚಾಯಿತಿ ಅಧಿಕಾರ ಬಿಜೆಪಿ ತೆಕ್ಕೆಗೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 11:05 IST
Last Updated 20 ಆಗಸ್ಟ್ 2025, 11:05 IST
   

ಅಜ್ಜಂಪುರ: ಇಲ್ಲಿನ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಅಧಿಕಾರದ ಚುಕ್ಕಾಣಿ ಬಿಜೆಪಿ ಪಾಲಾಗಿದೆ.

ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಮೊದಲ ಬಾರಿಗೆ ಚುನಾವಣೆ ಭಾನುವಾರ ನಡೆದಿತ್ತು. ಮೊದಲ ಚುನಾವಣೆಯಲ್ಲೇ ಬಿಜೆಪಿ ಅಧಿಕಾರ ಹಿಡಿದಿದೆ‌. 11 ವಾರ್ಡ್ ಗಳ ಪೈಕಿ 6 ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದು, 5 ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ತರೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ.ಎಚ್.ಶೀನಿವಾಸ್ ಮತ್ತು ಬಿಜೆಪಿ ಮಾಜಿ ಶಾಸಕ ಡಿ.ಎಸ್. ಸುರೇಶ್ ಅವರಿಗೆ ಈ ಚುನಾವಣೆ ಪ್ರತಿಷ್ಠೆಯಾಗಿತ್ತು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.