ADVERTISEMENT

ವಿಶ್ವಕ್ಕೆ ಬೆಳಕು ನೀಡಿದ ಅಕ್ಕ ನಾಗಲಾಂಬಿಕೆ

ಪಂಡಿತಾರಾಧ್ಯ ಶ್ರೀ ಅಭಿಮತ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 2:13 IST
Last Updated 1 ಜುಲೈ 2022, 2:13 IST
ನೂತನ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಸಾಣೀಹಳ್ಳಿ ಪಂಡಿತಾರಾಧ್ಯ ಶ್ರೀಗಳು ನೇರವೆರಿಸಿದರು.
ನೂತನ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಸಾಣೀಹಳ್ಳಿ ಪಂಡಿತಾರಾಧ್ಯ ಶ್ರೀಗಳು ನೇರವೆರಿಸಿದರು.   

ತರೀಕೆರೆ: ವಚನ ಸಾಹಿತ್ಯ ರಚಿಸಿ, ಬೆಳೆಸಿ ಸಂರಕ್ಷಣೆ ಮಾಡುವಲ್ಲಿ ಶಿವಶರಣೆ ಅಕ್ಕನಾಗನಾಗಲಾಂಬಿಕೆ ಕಾರ್ಯ ಮಹತ್ವದಾಗಿದೆ ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ಅವರು ಪಟ್ಟಣದ ಅಕ್ಕನಾಗಲಾಂಬಿಕೆ ಕಾಲೋನಿಯಲ್ಲಿ ನಿರ್ಮಾಣವಾಗಿರುವ ನೂತನ ಅಕ್ಕನಾಗಲಾಂಬಿಕೆ ಸಮುದಾಯ ಭವನದ ಉದ್ಘಾಟನಾ ಕಾರ್ಯಕ್ರಮದಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಅಕ್ಕನಾಗಲಾಂಬಿಕೆ ಅವರು ಕಲ್ಯಾಣದಿಂದ ಇಲ್ಲಿಯವರೆಗೆ ಬಂದು ವಚನ ಸಾಹಿತ್ಯ ಮತ್ತು ಅನುಭವ ಮಂಟಪವನ್ನು ಪರಿಚಯಿಸಿದರು ಎಂದು ಹೇಳಿದರು.

ADVERTISEMENT

ಶಾಸಕ ಡಿ.ಎಸ್. ಸುರೇಶ್ ಮಾತನಾಡಿ, ‘ನಮ್ಮ ಅಧಿಕಾರ ಅವಧಿಯಲ್ಲಿ ಸಮುದಾಯ ಭವನಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಯಾತ್ರಿನಿವಾಸಕ್ಕೆ ಹೆಚ್ಚಿನ ಅನುದಾನ ನೀಡುವುದಲ್ಲದೇ, ಈ ಕ್ಷೇತ್ರವನ್ನು ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ದಿ ಪಡಿಸಲಾಗುವುದು’ ಎಂದರು.

ಮುಖಂಡ ಎಸ್.ಎಂ. ನಾಗರಾಜು, ಅಕ್ಕನಾಗಲಾಂಬಿಕೆ ಬಿಜ್ಜಳ ಆಡಳಿತದಲ್ಲಿನ ಕಂದಾಚಾರಗಳನ್ನು ಖಂಡಿಸಿ ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದರು ಎಂದರು.

ಮುಖಂಡ ಜಿ.ಎಚ್. ಶ್ರೀನಿವಾಸ್ ಮಾತನಾಡಿ, ‘ಅನೇಕರ ಶ್ರಮದಿಂದ ಪೂಜ್ಯರ ಮಾರ್ಗದರ್ಶನದಿಂದ ಸಮುದಾಯ ಭವನ ನಿರ್ಮಾಣವಾಗಿದೆ. ನಮ್ಮ ಅಧಿಕಾರ ಅವಧಿಯಲ್ಲಿ ಅನುದಾನ ನೀಡಲಾಗಿದೆ’ ಎಂದರು.

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಆನಂದಪ್ಪ, ಪುರಸಭಾ ಸದಸ್ಯರಾದ ಆಶಾ ಅರುಣ್ ಕುಮಾರ್, ಉಪ ವಿಭಾಗಧಿಕಾರಿ ಸಿದ್ದಲಿಂಗರೆಡ್ಡಿ ಮಾತನಾಡಿದರು. ತಹಶೀಲ್ದಾರ್ ಪೊರ್ಣಿಮಾ, ಮುಖಂಡರಾದ ಕೆ.ಆರ್. ಧ್ರುವಕುಮಾರ್, ದೋರನಾಳು ಪರಮೇಶ್, ಸಮುದಾಯ ಭವನ ಸಮಿತಿ ಸದಸ್ಯರಾದ ರಂಗಪ್ಪ, ಪದ್ಮರಾಜ್, ಚಿತ್ರಶೇಖರಪ್ಪ, ರಾಜಪ್ಪ, ಇಒ ಗೀತಾ ಶಂಕರ್, ಪುರಸಭಾ ಮುಖ್ಯಧಿಕಾರಿ ಮಹಂತೇಶ್, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.