
ಚಿಕ್ಕಮಗಳೂರು: ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ರಚನೆಗೊಂಡಿರುವ ಅಕ್ಕಪಡೆ ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಮಂಗಳವಾರ ಕಾರ್ಯಾರಂಭ ಮಾಡಿದೆ.
ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅಕ್ಕ ಪಡೆಯ ವಾಹನಕ್ಕೆ ಚಾಲನೆ ನೀಡಿದರು.
ಜಿಲ್ಲಾ ಮಟ್ಟದಲ್ಲಿ ಮಹಿಳಾ ಗೃಹ ರಕ್ಷಕರನ್ನು ಒಳಗೊಂಡ ಈ ಪಡೆಯು ಸ್ಥಳೀಯ ಪೊಲೀಸರ ಸಹಯೋಗದಲ್ಲಿ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯ ತನಕ ಎರಡು ಪಾಳಿಗಳಲ್ಲಿ ಅಂದರೆ, ಬೆಳಿಗ್ಗೆ 7ರಿಂದ ಮಧ್ಯಾಹ್ನ 2ಗಂಟೆ ಮತ್ತು ಮಧ್ಯಾಹ್ನ 2ರಿಂದ ರಾತ್ರಿ 8ರ ತನಕ ಕಾರ್ಯನಿರ್ವಹಿಸಲಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಿಸುವ ಗುರಿ ಹೊಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ವೈ.ಆಲದಾರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.