ಆಲ್ದೂರು ಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಗೀತೆ ರಚನಾಕಾರ, ಸಂಗೀತ ನಿರ್ದೇಶಕ ಹಂಸಲೇಖ ಸೋಮವಾರ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸ್ವಲ್ಪ ಹೊತ್ತು ಕಳೆದರು. ಅಂಬೇಡ್ಕರ್ ಹೋರಾಟ ವೇದಿಕೆಯ ಅಧ್ಯಕ್ಷ ನವರಾಜು.ಎಚ್, ಫೆಬ್ರುವರಿ 4 ಮತ್ತು 5ರಂದು ಆಲ್ದೂರು ಅಂಬೇಡ್ಕರ್ ವೃತ್ತದಲ್ಲಿ ನಡೆಯಲಿರುವ ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಿದರು.
ಪಂಚಾಯಿತಿ ಉಪಾಧ್ಯಕ್ಷ ಕೌಶಿಕ್ ಎ.ಡಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಯು, ಇಬ್ರಾಹಿಂ, ಮುಖ್ಯ ಶಿಕ್ಷಕ ಸಿ.ಎಸ್, ಸುರೇಶ್, ಭೀಮ್ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಗಿರೀಶ್ ದೊಡ್ಡ ಮಾಗರವಳ್ಳಿ, ಪಂಚಾಯಿತಿ ನಿಕಟ ಪೂರ್ವ ಸದಸ್ಯ ಮೈದಿನ್ ಕುಟ್ಟಿ, ಕಠಾರದಳ್ಳಿ ಗಣೇಶ್, ವಸಂತ ಕುಮಾರ್, ದೀಪ ನಾಗೇಶ್ ,ಪೂರ್ಣೆಶ್, ಹೆಡದಾಳು ಪುಟ್ಟರಾಜು ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.