ADVERTISEMENT

ಆಲ್ದೂರು: ಸತ್ತಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 3:11 IST
Last Updated 17 ಫೆಬ್ರುವರಿ 2026, 3:11 IST
ಸತ್ತಿಹಳ್ಳಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಶಾಸಕಿ ನಯನ ಮೋಟಮ್ಮ ಸೋಮವಾರ ಉದ್ಘಾಟಿಸಿದರು
ಸತ್ತಿಹಳ್ಳಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಶಾಸಕಿ ನಯನ ಮೋಟಮ್ಮ ಸೋಮವಾರ ಉದ್ಘಾಟಿಸಿದರು   

ಆಲ್ದೂರು: ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಸತ್ತಿಹಳ್ಳಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಸಾಧಕರಾಗಿ ಸಮಾಜದಲ್ಲಿ ಉತ್ತಮ ಜೀವನ ನಡೆಸುತ್ತಿರುವುದನ್ನು ಕಂಡು ಸಂತಸವಾಗುತ್ತದೆ. ಶಾಲೆಯ ಕಟ್ಟಡ ನಿರ್ಮಾಣಕ್ಕೆ ಭೂದಾನ ನೀಡಿದ ದಾನಿಗಳ ಹೃದಯ ವೈಶಾಲ್ಯ ಶ್ಲಾಘನೀಯ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಇಲ್ಲಿಗೆ ಸಮೀಪದ ಸತ್ತಿಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಆಧರಿತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದೆ ಎಂದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಟಿ.ಆರ್, 1926ರಲ್ಲಿ ಬ್ರಿಟಿಷ್‌ ಆಡಳಿತಾವಧಿಯಲ್ಲಿ ಪ್ರಾರಂಭವಾದ ಸತ್ತಿಹಳ್ಳಿ ಶಾಲೆ ತನ್ನದೆ ಚರಿತ್ರೆ ಸೃಷ್ಟಿಸಿದೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲ. ಸರ್ಕಾರಿ ಶಾಲೆಗಳ ಉಳಿವಿಗೆ ಸರ್ವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ADVERTISEMENT

ಹಳೆವಿದ್ಯಾರ್ಥಿ, ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟದ ನಿರ್ದೇಶಕ ಅಶೋಕ್ ಸೂರಪ್ಪನಹಳ್ಳಿ ಮಾತನಾಡಿ, ಸತ್ತಿಹಳ್ಳಿ ಶಾಲೆಗೆ ಸುತ್ತಮುತ್ತಲಿನ 26 ಹಳ್ಳಿಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದರು. ಜಿಲ್ಲೆಯಲ್ಲಿ 1,332 ಶಾಲೆಗಳಿದ್ದು, ಅದರಲ್ಲಿ 69 ಶಾಲೆಗಳು ಮುಚ್ಚಲ್ಪಟ್ಟಿವೆ ಎಂಬ ಮಾಹಿತಿ ಇದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮಾತ್ರ ಸರ್ಕಾರಿ ನೌಕರಿ ಎಂಬ ಕಾನೂನು ಜಾರಿಗೆ ತಂದರೆ ಶಾಲೆಗಳು ಮುಚ್ಚಲ್ಪಡುವುದಿಲ್ಲ ಎಂದು ಹೇಳಿದರು. ತಮ್ಮ ಶಾಲಾ ದಿನಗಳ ನೆನಪುಗಳನ್ನು ಹಂಚಿಕೊಂಡರು.

ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರತರುವ ಮುಖ್ಯವಾಹಿನಿ ಶಿಕ್ಷಕರಾಗಿದ್ದಾರೆ ಎಂದರು.

ಭೂದಾನ ನೀಡಿದ ಮಂಜೇಗೌಡ, ಸಿದ್ದೇಗೌಡ ಬಿ.ಆರ್, ಪರಮೇಶ್ ಬಿ.ಆರ್, ಮೋಹನ್, ಸೆತ್ನಾ ಅವರನ್ನು ಸ್ಮರಿಸಿ ಅವರ ಕುಟುಂಬದವರನ್ನು, ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ್ ಕಾರೆಹಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಡಿಡಿಪಿಐ ತಿಮ್ಮರಾಜು, ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ, ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಾಬಿರ್, ಹೋಬಳಿ ಅಧ್ಯಕ್ಷ ಕೆಳಗೂರು ಪೂರ್ಣೇಶ್, ಶತಮಾನೋತ್ಸವ ಆಚರಣೆ ಸಮಿತಿಯ ಸಂದೀಪ್ ಹರವಿನ ಗಂಡಿ, ಶಂಕರ್ ಸೂರಪ್ಪನಹಳ್ಳಿ, ನಿತ್ಯ ಯಲಗುಡಿಗೆ, ರಘು, ಚಂದ್ರಶೇಖರ್, ಚೇತನ್, ಸತೀಶ್, ದೇವರಾಜ್, ಮೂರ್ತಿ, ಇಂದ್ರೇಶ್, ಯೋಗೇಶ್, ಗೆಲ್ಲೇಶ್ ಅಶ್ವಥ್ ,ಹೇಮಂತ್, ಹರೀಶ್, ಮಲ್ಲೇಶ್, ರವಿ, ಸುಜಿತ್, ಧ್ರುವ ಕುಮಾರ್, ಶಾಕಿರ್ ಹುಸೇನ್, ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.