ಆಲ್ದೂರು: ಅಂಬೇಡ್ಕರ್ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಭೀಮ್ ಆರ್ಮಿ ಜಿಲ್ಲಾ ಮತ್ತು ಆಲ್ದೂರು ಘಟಕದ ವತಿಯಿಂದ ತುಡುಕೂರು ಬಸ್ ನಿಲ್ದಾಣದಿಂದ ಗಾಳಿಗಂಡಿವರೆಗೆ ಬೈಕ್ ಜಾಥಾ ನಡೆಯಿತು.
ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ, ಸರ್ಕಲ್ ಇನ್‌ಸ್ಪೆಕ್ಟರ್ ಪಿ.ಪಿ ಸೋಮೇಗೌಡ ಮಾತನಾಡಿ, ‘ಅಂಬೇಡ್ಕರ್ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಅವರ ಜಯಂತಿಯನ್ನು ದೇಶದ ಪ್ರತಿಯೊಬ್ಬ ಪ್ರಜೆ, ಎಲ್ಲ ಸಮುದಾಯದವರು ಸೇರಿ ಆಚರಿಸಬೇಕು’ ಎಂದರು.
ಜಿಲ್ಲಾ ಘಟಕದ ಅಧ್ಯಕ್ಷ ಗಿರೀಶ್ ಮಾತನಾಡಿ, ‘ಅಂಬೇಡ್ಕರ್ ಪುತ್ಥಳಿ ನಿರ್ಮಾಣವಾದ ಬಳಿಕ ನಡೆಯುತ್ತಿರುವ ಪ್ರಥಮ ಅಂಬೇಡ್ಕರ್ ಜಯಂತಿ ಇದಾಗಿದ್ದು, ಇದೇ ಜಯಂತಿ ದಿನ ಭೀಮ್ ಆರ್ಮಿ ನೂತನ ಹೋಬಳಿ ಘಟಕವನ್ನು ಸ್ಥಾಪಿಸಲಾಗಿದೆ’ ಎಂದರು. ಹೋಬಳಿ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಹರೀಶ್, ಯುವ ಘಟಕದ ಅಧ್ಯಕ್ಷ ಅಜಿತ್, ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.