ADVERTISEMENT

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 12:40 IST
Last Updated 23 ಜೂನ್ 2023, 12:40 IST

ಕೊಪ್ಪ: ತಾಲ್ಲೂಕಿನ ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್‌ನಿಂದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರುವ ಟ್ರಸ್ಟ್ ಸದಸ್ಯರ ಮಕ್ಕಳು ಹಾಗೂ ತಾಲ್ಲೂಕು ವ್ಯಾಪ್ತಿಯ ವಿಪ್ರ ಸಮಾಜದ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾನಿಧಿ ಯೋಜನೆಯಡಿಯಲ್ಲಿ ವಿದ್ಯಾರ್ಥಿ ವೇತನವನ್ನು ಪಡೆಯಲು ಎಸ್ಸೆಸ್ಸೆಲ್ಸಿ ಬಳಿಕ ವಿದ್ಯಾಭ್ಯಾಸ ಮಾಡುತ್ತಿರುವ, ಆರ್ಥಿಕವಾಗಿ ಸಶಕ್ತರಲ್ಲದ ತಾಲ್ಲೂಕು ವ್ಯಾಪ್ತಿಯ ವಿಪ್ರ ಸಮಾಜದ ಮಕ್ಕಳು ಅರ್ಜಿ ಆಹ್ವಾನಿಸಲಾಗಿದೆ.

ದೃಢೀಕೃತ ಅಂಕಪಟ್ಟಿ, ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಕೊಪ್ಪದ ಬೇಲಿಹಳ್ಳಿ ರಸ್ತೆಯ ಶಿಕ್ಷಕಿ ಎಂ.ಎಲ್.ಸುಧಾ (ಮೊ: 9448156989), ಕಾಳಿದಾಸ ರಸ್ತೆ ನಿವಾಸಿ ಸಿ.ಎಂ.ನಾಗಭೂಷಣ್ (ಮೊ: 9448657372) ಅವರನ್ನು ಸಂಪರ್ಕಿಸುವಂತೆ ಟ್ರಸ್ಟ್ ಕಾರ್ಯಾಧ್ಯಕ್ಷ ಎನ್.ಎಸ್.ಮುರಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.