ಪ್ರಜಾವಾಣಿ ವಾರ್ತೆ
ಶೃಂಗೇರಿ: ತೋಟಗಾರಿಕೆ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಸಹಾಯಧನ ನೀಡಲಾಗುತ್ತಿದ್ದು, ರೈತರು ಜೂನ್ 16ರಿಂದ 21ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಕೃಷ್ಣ ತಿಳಿಸಿದ್ದಾರೆ.
ತಾಳೆ ಬೆಳೆ, ತರಕಾರಿ ಕಿಟ್, ಅಡಿಕೆ ತೋಟದಲ್ಲಿ ಕಾಳು ಮೆಣಸು ವಿಸ್ತರಣೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಸೋಲಾರ್ ಪಂಪ್‍ಸೆಟ್, ಕೃಷಿ ಹೊಂಡ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ತೋಟಗಾರಿಕೆ ಬೆಳೆ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ, ಹನಿ ಮತ್ತು ತುಂತುರು ನೀರಾವರಿ, ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, ಕಂದು ಬಾಳೆ ಪ್ರದೇಶ ವಿಸ್ತರಣೆ, ಕಾಳು ಮೆಣಸು ಪುನಃಶ್ಚೇತನ, ಪಾಲಿಮನೆ ಬೆಳೆ ಪದ್ಧತಿ, ಟ್ರ್ಯಾಕ್ಟರ್, ಮಧುವನ ಮತ್ತು ಜೇನು ಸಾಕಾಣಿಕೆ ಮತ್ತಿತರ ಕಾರ್ಯಕ್ರಮಗಳಿಗೆ ಸಹಾಯ ಧನ ನೀಡಲಾಗುತ್ತದೆ. ಮಾಹಿತಿಗೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.