ADVERTISEMENT

ಮನೆಯಲ್ಲಿ ಸಾಮೂಹಿಕವಾಗಿ ನಮಾಜ್: 28 ಮಂದಿ ಬಂಧನ

lockdown probelrm

​ಪ್ರಜಾವಾಣಿ ವಾರ್ತೆ
Published 10 ಮೇ 2020, 16:33 IST
Last Updated 10 ಮೇ 2020, 16:33 IST

ನರಸಿಂಹರಾಜಪುರ: ಬೆಟ್ಟಗೆರೆ ವ್ಯಾಪ್ತಿಯ ಮನೆಯೊಂದರಲ್ಲಿ ಭಾನು ವಾರ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ, 28 ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಾಕ್‌ಡೌನ್ ಸಡಲಿಕೆಯಾಗಿ =ದ್ದರೂ ಸಾಮೂಹಿಕ ನಮಾಜ್ ಮಾಡುವುದನ್ನು ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿ ಬೆಟ್ಟಗೆರೆಯ ಮನೆಯೊಂದರಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ದಿಲೀಪ್ ಕುಮಾರ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದಾಗ ನಮಾಜ್ ಮಾಡುತ್ತಿದ್ದವರಲ್ಲಿ ಕೆಲವರು ಪರಾರಿಯಾಗಿದ್ದಾರೆ. 28 ಜನರನ್ನು ಬಂಧಿಸಿ ಅವರ ಮೇಲೆ ಮೊಕದ್ದಮ್ಮೆ ದಾಖಲಿಸಿದ್ದಾರೆ.

‘ಸಾಮೂಹಿಕ ನಮಾಜ್ ಆಯೋಜಿಸಿರುವ ಪ್ರಮುಖರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಉಳಿದವರ ಮೇಲೆ ಮೇಲಧಿಕಾರಿಗಳು ಸೂಚಿಸುವ ರೀತಿ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.