ADVERTISEMENT

ಚಿಕ್ಕಮಗಳೂರು: ಯುವ ವಕೀಲನ ಮೇಲೆ ಪೊಲೀಸರಿಂದ ಹಲ್ಲೆ– ವಕೀಲರ ಪ್ರತಿಭಟನೆ

ಯುವ ವಕೀಲನ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ ಚಿಕ್ಕಮಗಳೂರು ವಕೀಲರು ಶುಕ್ರವಾರ ಪ್ರತಿಭಟನೆ ನಡೆಸಿದರು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2023, 7:31 IST
Last Updated 1 ಡಿಸೆಂಬರ್ 2023, 7:31 IST
<div class="paragraphs"><p>ಹೆಲ್ಮೆಟ್ ಹಾಕದ ವಕೀಲರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ ವಕೀಲರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p></div>

ಹೆಲ್ಮೆಟ್ ಹಾಕದ ವಕೀಲರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ ವಕೀಲರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

   

ಚಿಕ್ಕಮಗಳೂರು: ಹೆಲ್ಮೆಟ್ ಹಾಕದ ವಕೀಲರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ ವಕೀಲರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ವಕೀಲರ ಸಂಘದ ಕಚೇರಿಯಲ್ಲಿ ತುರ್ತು ಸಭೆ ನಡೆಸಿದ ಸಾವಿರಾರು ವಕೀಲರು, ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್ ವೃತ್ತ, ಎಂ.ಜಿ.ರಸ್ತೆ, ಐ.ಜಿ.ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ನಗರ ಠಾಣೆ ಮುಂದೆಯೂ ತೆರಳಿ ಆಕ್ರೋಶ ವ್ಯಕ್ತಪಡಿಸಿದರು.

ವಕೀಲ ಪ್ರೀತಂ ಮೇಲೆ ಹಲ್ಲೆ ನಡೆಸಿರುವ ಪೊಲೀಸರನ್ನು ಕೂಡಲೇ ಬಂಧಿಸಬೇಕು. ಬಂಧಿಸುವ ತನಕ ಹೋರಾಟ ನಿಲ್ಲುವುದಿಲ್ಲ. ಕಲಾಪಕ್ಕೂ ಹಾಜರಾಗುವುದಿಲ್ಲ ಎಂದು ಪಟ್ಟು ಹಿಡಿದರು.

ಎಸ್ಪಿ ಕಚೇರಿ, ನಗರ ಠಾಣೆ ಸೇರಿ ಎಲ್ಲೆಡೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆಜಾದ್ ಪಾರ್ಕ್ ವೃತ್ತದಲ್ಲಿ ಹೋರಾಟ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.