ADVERTISEMENT

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮದ್ಯವರ್ಜನ ಶಿಬಿರ ಅಗತ್ಯ: ಜಿ.ಎಚ್. ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 7:22 IST
Last Updated 9 ಅಕ್ಟೋಬರ್ 2022, 7:22 IST
ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಸಮಾವೇಶವನ್ನು ಪುರಸಭೆ ಅಧ್ಯಕ್ಷೆ ಕಮಲ ರಾಜೇಂದ್ರ ಉದ್ಘಾಟಿಸಿದರು
ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಸಮಾವೇಶವನ್ನು ಪುರಸಭೆ ಅಧ್ಯಕ್ಷೆ ಕಮಲ ರಾಜೇಂದ್ರ ಉದ್ಘಾಟಿಸಿದರು   

ತರೀಕೆರೆ: ಯುವಕರು ದುಶ್ಚಟದಿಂದ ಹೊರ ಬಂದು ಉತ್ತಮ ಜೀವನ ರೂಢಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.

ಅವರು ಪಟ್ಟಣದ ದೇವಾಂಗ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮದ್ಯ ವರ್ಜನ ಶಿಬಿರಗಳನ್ನು ಆಯೋಜಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ADVERTISEMENT

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಎಸ್.ಗಣೇಶ್ ಮಾತನಾಡಿ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದರು.

ಪುರಸಭೆ ಅಧ್ಯಕ್ಷೆ ಕಮಲಾ ರಾಜೇಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಪತ್ರಕರ್ತ ಅನಂತ ನಾಡಿಗ್ ಮಾತನಾಡಿದರು. ಪುರಸಭಾ ಸದಸ್ಯರಾದ ಪಾರ್ವತಮ್ಮ, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಕುಸುಮಾಧರ್, ಸಂಯೋಜಧಿಕಾರಿ ನಂದಿನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.