ADVERTISEMENT

ಆಯುಷ್ಮಾನ್ ಭಾರತ್: ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 12:40 IST
Last Updated 27 ಸೆಪ್ಟೆಂಬರ್ 2019, 12:40 IST
ಕಳಸದಲ್ಲಿ ಶುಕ್ರವಾರ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆಯ ಬಗೆಗಿನ ಜನಜಾಗೃತಿ ಜಾಥಾ ನಡೆಯಿತು.
ಕಳಸದಲ್ಲಿ ಶುಕ್ರವಾರ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆಯ ಬಗೆಗಿನ ಜನಜಾಗೃತಿ ಜಾಥಾ ನಡೆಯಿತು.   

ಕಳಸ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವು ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆಯ ಪಾಕ್ಷಿಕ ಆಚರಣೆ ಪ್ರಯುಕ್ತ ಶುಕ್ರವಾರ ಜನಜಾಗೃತಿ ಜಾಥಾ ಹಮ್ಮಿಕೊಂಡಿತ್ತು.

ಜಿಲ್ಲಾ ಪಂಚಾಯತಿ ಸದಸ್ಯ ಕೆ.ಆರ್.ಪ್ರಭಾಕರ್ ಜಾಥಾಕ್ಕೆ ಚಾಲನೆ ನೀಡಿದರು. ಆಸ್ಪತ್ರೆಯಿಂದ ಹೊರಟ ಜಾಥಾ ಮುಖ್ಯರಸ್ತೆ ಮೂಲಕ ಕಳಸೇಶ್ವರ ದೇವಸ್ಥಾನದವರೆಗೆ ತಲುಪಿ ಅಲ್ಲಿಂದ ಕೆ.ಎಂ. ರಸ್ತೆ ಮಹಾವೀರ ರಸ್ತೆ ಮುಖಾಂತರ ಆಸ್ಪತ್ರೆಗೆ ಮರಳಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತಿ, ಪಂಚಾಯಿತಿ ಸದಸ್ಯರು, ಎಪಿಎಂಸಿ ಅಧ್ಯಕ್ಷ ಸಂತೋಷ್, ಬ್ಲಾಕ್ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ, ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರೇಮ್ ಕುಮಾರ್, ಆರೋಗ್ಯ ಮಿತ್ರ ಮಲ್ಲೇಶ್, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕಾರಿ ನಂಜುಡಸ್ವಾಮಿ, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.