ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಬೊಗಸೆ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ 100ರಷ್ಟಾಗಿದೆ.
ಪರೀಕ್ಷೆ ಬರೆದ 22 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಬಿ.ಎನ್.ಮಾನ್ಯ (593), ಬಿ.ಎಲ್.ಮಾನ್ಯ (584), ತುಳಸಿ (526) ಹಾಗೂ ಮಿಲನ (525) ಅಂಕ ಪಡೆದಿದ್ದಾರೆ. ಸತತ 12 ವರ್ಷಗಳಿಂದ ಶಾಲೆ ಶೇ 100 ಫಲಿತಾಂಶ ದಾಖಲಿಸುತ್ತಿದೆ ಎಂದು ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಆರ್. ಪರಮೇಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.