
ಪ್ರಜಾವಾಣಿ ವಾರ್ತೆ
ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಬಾಳೆಹೊನ್ನೂರು: ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲ್ಪಾಲ್ ಬಳಿಯ ಗಂಗೋಜಿ ಎಂಬಲ್ಲಿ 13 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡವ.
ಬಾಲಕ ಊರಿನಲ್ಲಿ ನಡೆದ ಮದುವೆಗೆ ತೆರಳಿದ್ದು, ಅಲ್ಲಿ ಮದ್ಯ ಸೇವಿಸಿದ್ದ. ವಿಷಯ ಮನೆಯಲ್ಲಿ ಗೊತ್ತಾದರೆ ಎಂಬ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಾಲಕನ ತಂದೆ ಜಯರಾಮ್ ಪೊಲೀಸರಿಗೆ ದೂರು ನೀಡಿದ್ದಾರೆ.
ಠಾಣಾಧಿಕಾರಿ ರವೀಶ್ ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.