ಕಡೂರು: ತಾಲ್ಲೂಕಿನ ಸಖರಾಯಪಟ್ಟಣದ ಅಯ್ಯನಕೆರೆ ಬಳಿ ಇರುವ ಶ್ರೀ ಬಲ್ಲಾಳೇಶ್ವರ ಸ್ವಾಮಿಗೆ ಮಳೆಗಾಗಿ ಪ್ರಾರ್ಥಿಸುವ ವಿಶೇಷ ಪೂಜೆ ಸೋಮವಾರ ರುದ್ರಹೋಮ, ಅನ್ನಸಂತರ್ಪಣೆಯೊಂದಿಗೆ ಸಂಪನ್ನಗೊಂಡಿತು.
ಐದು ದಿನಗಳಿಂದ ನಡೆದ ಕಾರ್ಯಕ್ರಮಗಳಲ್ಲಿ ಗಣಪತಿಪೂಜೆ, ಗಂಗಾಪೂಜೆ, ಪುಣ್ಯಾಹ, ಗಣಪತಿಹೋಮ, ಚಂಡಿಕಾಹೋಮ, ಪರ್ಜನ್ಯಜಪ, ಕನ್ನಿಕಾಪೂಜೆ, ಸುಮಂಗಲಿ ಪೂಜೆ, ನವಗ್ರಹ ಹೋಮ, ಮೃತ್ಯುಂಜಯ ಹೋಮ,ಪರ್ಜನ್ಯ ಹೋಮ, ಲಕ್ಷ್ಮಿ ನಾರಾಯಣ ಹೃದಯ ಹೋಮ, ಮಹಾಸೌರ ಪಾರಾಯಣ, ಹೋಮ, ನಿರಂತರ ಶತ ರುದ್ರಾಭಿಷೇಕ ಕಾರ್ಯಕ್ರಮಗಳು ಮತ್ತು ವಿಶೇಷ ಅಲಂಕಾರ ಸೇವೆಗಳು ನಡೆದವು. ಸೋಮವಾರ ಧಾರ್ಮಿಕ ಕಾರ್ಯಕ್ರಮಗಳ ಮುಕ್ತಾಯ ಸಮಾರಂಭದಲ್ಲಿ ಸಕರಾಯಪಟ್ಟಣ ಮತ್ತು ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.