ಕೊಪ್ಪ: ತಾಲ್ಲೂಕಿನಲ್ಲಿ ಗಾಳಿ, ಮಳೆಯ ಆರ್ಭಟ ಹೆಚ್ಚಾಗಿದೆ. ಸತತ ಮಳೆಯಿಂದ ಸಾಕಷ್ಟು ಹಾನಿ ಸಂಭವಿಸಿದೆ. ಚಾವಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಕಮ್ಮರಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣಗೋಡೆ ಮಳೆಯಿಂದ ಕುಸಿದಿದೆ. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಕಟ್ಟಡಕ್ಕೆ ಹನಿಯಾಗಿದೆ. ಬೆಳವಾಡಿ ಗ್ರಾಮದ ಕಲ್ಲುಬಸ್ತಿ ನಿವಾಸಿ ಕೃಷ್ಣಮೂರ್ತಿ ಎಂಬುವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಕೋಡೂರು ಗ್ರಾಮದ ಕಾರ್ಗದ್ದೆ ನಿವಾಸಿ ಜಯಲಕ್ಷ್ಮಿ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ.
ಗುರುವಾರವೂ ಮಳೆ ಮುಂದುವರಿದಿತ್ತು. ಕುಂಚೂರು ಘಾಟಿ ರಸ್ತೆಯಲ್ಲಿ ಧರೆ ಮತ್ತಷ್ಟು ಕುಸಿಯುತ್ತಿದೆ. ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಿ, ವಾಹನ ಸಂಚಾರ ನಿಷೇಧಿಸಿದ್ದಾರೆ. ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಶಾಲೆಗಳಿಗೆ ರಜೆ ಘೋಷಣೆ ಮಾಡಿರುವ ವಿಚಾರ ತಡವಾಗಿ ತಿಳಿದಿದ್ದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.